Cinisuddi Fresh Cini News 

ಮಂಡ್ಯ, ಮೈಸೂರು, ಬೆಂಗಳೂರು ಸುತ್ತಮುತ್ತ `ರಾಜಲಕ್ಷ್ಮೀ’ ಶೂಟಿಂಗ್

ಎಸ್.ಕೆ.ಎಂ ಮೂವೀಸ್ ಲಾಂಛನದಲ್ಲಿ ಮೋಹನ್ ಕುಮಾರ್ ಎಸ್.ಕೆ ಅವರು ನಿರ್ಮಿಸುತ್ತಿರುವ `ರಾಜಲಕ್ಷ್ಮೀ` ಚಿತ್ರಕ್ಕೆ ನಿರಂತರ ಚಿತ್ರೀಕರಣ ನಡೆಯುತ್ತಿದೆ. ಮಂಡ್ಯ, ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಶ್ರೀಕಾಂತ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಾಗರಾಜಮೂರ್ತಿ ಅವರ ಛಾಯಾಗ್ರಹಣವಿದೆ. ಎ.ಟಿ.ರವೀಶ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕಾಂತರಾಜ್ ಬರೆದಿದ್ದಾರೆ. ಕಿರಣ್-ಅರ್ಜುನ್ ಸಂಕಲನ, ನವೀನ್ ಕನ್ನಡಿಗ ನೃತ್ಯ ನಿರ್ದೇಶನ, ಸಂಕರ್ ಶಾಸ್ತ್ರಿ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಗಡಿ ಯತೀಶ್ ಸಂಭಾಷಣೆ ಬರೆದಿದ್ದಾರೆ.

ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ, ನವೀನ್ ತೀರ್ಥಹಳ್ಳಿ, ರಶ್ಮಿಗೌಡ, ಚಂದ್ರಪ್ರಭ(ಮಜಾಭಾರತ), ಸ್ಟೈಲ್ ಶಶಿ, ಸೀತಾರಾಂ, ಮುತ್ತುರಾಜ್, ಸದಾನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಮರಾಜ್ಯದ ಥರಹ ಇದ್ದ ಊರೊಂದು ಕಾರಾಣಾಂತರದಿಂದ ರಾವಣರಾಜ್ಯವಾಗುತದೆ. ಮತ್ತೆ ಆ ಊರು ರಾಮರಾಜ್ಯ ಹೇಗೆ ಆಗುತ್ತದೆ ಎಂಬ ಕಥಾಹಂದರದ ಜೊತೆಗೆ ಈ ಚಿತ್ರದಲ್ಲಿ ಲವ್ ಸ್ಟೋರಿ ಕೂಡ ಇರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

Share This With Your Friends

Related posts