Cini NewsSandalwood

ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್

Spread the love

ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. “ರತ್ನನ್ ಪ್ರಪಂಚ” ಮೂಲಕ ರೋಹಿತ್ ಪದಕಿ, “ಪೌಡರ್” ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, “ಗುರುದೇವ್ ಹೊಯ್ಸಳ” ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದ್ದು, ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ.

ಪ್ರಸ್ತುತವಾಗಿ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರ ಸೆಟ್ಟೇರಿದ್ದು, “ಪೌಡರ್” ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ.

Visited 1 times, 1 visit(s) today
error: Content is protected !!