Cini NewsSandalwood

ಹೊಸ ರೂಪದಲ್ಲಿ “ಸಂಜು ವೆಡ್ಸ್ ಗೀತಾ-2” ಸದ್ಯದಲ್ಲೇ ರೀರಿಲೀಸ್

Spread the love

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ -2 ಚಿತ್ರವು ಕಳೆದವಾರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದಲೂ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು.

ಜನವರಿ 10ಕ್ಕೇ ರಿಲೀಸಾಗಬೇಕಿದ್ದ ಈ ಚಿತ್ರಕ್ಕೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಸಿನಿಮಾ ಬಿಡುಗಡೆಯಾಗದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆದ ಕಾರಣ ಜ.17ಕ್ಕೆ ಸಂಜು ವೆಡ್ಸ್ ಗೀತಾ-2 ಚಿತ್ರ ಎಲ್ಲೆಡೆ ತೆರೆ ಕಂಡಿತ್ತು.

ಚಿತ್ರ ಬಿಡುಗಡೆಯಾದ ನಂತರ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಚಿತ್ರದ ಕಂಟೆಂಟ್, ಹಾಡುಗಳು, ಅದ್ದೂರಿ ಮೇಕಿಂಗ್ ಎಲ್ಲವನ್ನೂ ಸಹ ತುಂಬಾ ಇಷ್ಟ ಪಟ್ಟಿದ್ದರು. ಚಿತ್ರದ ನಿರೂಪಣೆ, ಕ್ಯಾಮೆರಾ ವರ್ಕ್ ಎಲ್ಲವೂ ಅದ್ಭುತವಾಗಿದ್ದರೂ ಸಹ ಎಲ್ಲೋ ಒಂದು ಕಡೆ ಚಿತ್ರವನ್ನು ಇನ್ನೂ ಚೆನ್ನಾಗಿ ಮಾಡಬಹುದಿತ್ತು ಎಂಬ ಅಭಿಪ್ರಾಯ ಕೆಲವರಿಂದ ಕೇಳಿಬಂದಿತ್ತು, ಬಿಡುಗಡೆಯ ಸಂದರ್ಭದಲ್ಲಿ ಒಂದಷ್ಟು ಆತಂಕ ಸೃಷ್ಟಿಯಾಗಿದ್ದ ಕಾರಣ ಎಲ್ಲವನ್ನೂ ಗಮನಿಸಲು ಚಿತ್ರತಂಡಕ್ಕೂ ಸಾಧ್ಯವಾಗಿದ್ದಿಲ್ಲ, ಹಾಗಾಗಿ ಕಳೆದ ಜನವರಿ 20ರಿಂದಲೇ ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರದರ್ಶನವನ್ನು ವಿತರಕರಿಗೆ ಹೇಳಿ ಎಲ್ಲಾ ಕೇಂದ್ರಗಳಲ್ಲಿ ಸ್ಥಗಿತಗೊಳಿಸಲಾಗಿದೆ.

ಈಗ ಹೊಸದಾಗಿ 20 ನಿಮಿಷಗಳ ಹೃದಯ ಸ್ಪರ್ಶಿ ಚಿತ್ರಣವನ್ನು ಚಿತ್ರಕ್ಕೆ ಮರು ಜೋಡಿಸಲಾಗುತ್ತಿದೆ, ಇನ್ಮುಂದೆ ನವನವೀನ ರೂಪದಲ್ಲಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ, ಚಿತ್ರದ ರೀರಿಲೀಸ್ ದಿನಾಂಕವನ್ನು ಅತಿ ಶೀಘ್ರದಲ್ಲೇ ಪ್ರಕಟಿಸುವುದಾಗಿ ನಿರ್ಮಾಪಕ ಛಲವಾದಿ‌ ಕುಮಾರ್ ಹಾಗೂ ನಿರ್ದೇಶಕ ನಾಗಶೇಖರ್ ಅವರುಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Visited 1 times, 1 visit(s) today
error: Content is protected !!