Cini NewsSandalwood

ಉತ್ತಮ ಮೊತ್ತಕ್ಕೆ “ಚೌಕಿದಾರ್” ಆಡಿಯೋ ರೈಟ್ಸ್ ಸೇಲ್

ಪ್ರಖ್ಯಾತ ಲಹರಿ ಸಂಸ್ಥೆಯ ಭಾಗವಾದ MRT ಮ್ಯೂಸಿಕ್ ತೆಕ್ಕೆಗೆ ಚೌಕಿದಾರ್ ಆಡಿಯೋ ಹಕ್ಕು. ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಪೃಥ್ವಿ ಅಂಬಾರ್-ಧನ್ಯ ರಾಮ್ ಕುಮಾರ್ ‘ಚೌಕಿದಾರ್’ ಆಡಿಯೋ ರೈಟ್ಸ್.

‘ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಹಾಗೂ ಧನ್ಯರಾಮ್ ಕುಮಾರ್ ಜೋಡಿಯಾಗಿ ನಟಿಸುತ್ತಿರುವ ‘ಚೌಕಿದಾರ್‌’ ಸಿನಿಮಾ ಈಗಾಗಲೇ ತನ್ನ ಕಂಟೆಂಟ್ ಮೂಲಕ ಸದ್ದು‌ ಮಾಡುತ್ತಿದೆ. ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ‌ ಕಂಪ್ಲೀಟ್ ಮಾಸ್ ಅವತಾರವೆತ್ತಿರುವ ಈ ಚಿತ್ರದ ಆಡಿಯೋ ರೈಟ್ಸ್ ಉತ್ತಮ ಮೊತ್ತಕ್ಕೆ ಸೇಲ್ ಆಗಿದೆ.

ಚೌಕಿದಾರ್ ಸಿನಿಮಾದ ಆಡಿಯೋ ಹಕ್ಕು ಪ್ರಖ್ಯಾತ ಲಹರಿ ಸಂಸ್ಥೆಯ ಭಾಗವಾಗಿರುವ‌ ಎಂಆರ್ ಟಿ ಮ್ಯೂಸಿಕ್ ಸಂಸ್ಥೆ ಪಾಲಾಗಿದೆ. ದಾಖಲೆ‌ ಮೊತ್ತಕ್ಕೆ ಚಿತ್ರತಂಡ ಆಡಿಯೋ ರೈಟ್ಸ್ ಮಾರಾಟ ಮಾಡಿದೆ. ಈ ಮೂಲಕ ಚೌಕಿದಾರ್ ಸಿನಿಮಾ ಬಿಡುಗಡೆಗೂ‌ ಮೊದಲೇ ಒಂದೊಳ್ಳೆ ಮೊತ್ತವನ್ನು ಗಳಿಸಿದಂತಾಗಿದೆ.

ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಚೌಕಿದಾರ್ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರದಲ್ಲಿ ಸ್ಟಾರ್ ಕಾಸ್ಟ್ ತುಂಬಾನೇ ಚೆನ್ನಾಗಿದೆ. ದೊಡ್ಮನೆಯ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ ಈ ಚಿತ್ರದಲ್ಲಿ ನಾಯಕಿ ಆಗಿದ್ದಾರೆ. ದಿಯಾ ಚಿತ್ರ ಖ್ಯಾತಿಯ ನಟ ಪೃಥ್ವಿ ಅಂಬಾರ್ ಇಲ್ಲಿ ವಿಭಿನ್ನವಾಗಿಯೇ ಕಾಣಿಸುತ್ತಿದ್ದಾರೆ. ರಗಡ್ ರೋಲ್ ಮೂಲಕವೇ ಎಲ್ಲರ ಗಮನ ಸೆಳೆಯಲಿದ್ದಾರೆ.

ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ದೊಡ್ಡ ಪರದೆಗೆ ಕಾಲಿಟ್ಟಿದ್ದಾರೆ. ಡೈಲಾಗ್ ಕಿಂಗ್ ಸಾಯಿಕುಮಾರ್ ಕೂಡ ಈ ಸಿನಿಮಾದಲ್ಲಿದ್ದಾರೆ. ನಟಿ ಸುಧಾರಾಣಿ ಈ ಚಿತ್ರದಲ್ಲಿ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದಾರೆ.

ಚೌಕಿದಾರ್ ಗೆ ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆಯುತ್ತಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚೌಕಿದಾರ್ ಸಿನಿಮಾವನ್ನು ಅಷ್ಟೇ ಅದ್ಧೂರಿಯಾಗಿ ಹಾಗೂ ಸೊಗಸಾಗಿ ನಿರ್ಮಿಸಲಾಗುತ್ತಿದೆ. ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ.

error: Content is protected !!