Cini NewsSandalwood

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ “ಡಿಜಾಂಗೋ ಕೃಷ್ಣಮೂರ್ತಿ” ಚಿತ್ರದ ಶೀರ್ಷಿಕೆ ಅನಾವರಣ.

ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ” ಎಂದು ಹೆಸರಿಡಲಾಗಿದೆ. ಗಣೇಶ್ ಅವರ ಹುಟ್ಟುಹಬ್ಬದ ದಿನವೇ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ‌‌.

ಗಣೇಶ್ ಅವರಿಗೆ ನಾಯಕಿಯಾಗಿ “ಹನುಮಾನ್” ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ‌. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನವಿರುವ “ಡಿಜಾಂಗೋ ಕೃಷ್ಣಮೂರ್ತಿ” ಚಿತ್ರಕ್ಕೆ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.
.

error: Content is protected !!