Cini NewsSandalwood

ವಿಜಯ್ ದೇವರಕೊಂಡ ಹೊಸ ಸಿನಿಮಾದ ಮುಹೂರ್ತ ಸಂಭ್ರಮ

Spread the love

ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕ್ಟ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ.

ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16 ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಸ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Visited 1 times, 1 visit(s) today
error: Content is protected !!