Cini NewsTollywood

ರಾಮ್ ಚರಣ್ ‘ಪೆದ್ದಿ’ಯಲ್ಲಿ ಅಚ್ಚಿಯಮ್ಮನಾಗಿ ಕಾಣಿಸಿಕೊಂಡ ಜಾನ್ವಿ ಕಪೂರ್

Spread the love

‘ಗ್ಲೋಬಲ್ ಸ್ಟಾರ್’ ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಪೆದ್ದಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ‘ಉಪ್ಪೆನ’ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಚಿತ್ರತಂಡ ಜಾನ್ವಿ ಕಪೂರ್ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

ಅಚಿಯಮ್ಮ ಪಾತ್ರದಲ್ಲಿ ಜಾನ್ವಿ‌ ಅಭಿನಯಿಸುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಜಾನ್ವಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೀಪಿನ ಮೇಲೆ ನಿಂತು ತಲೆಯ ಮೇಲೆ ಕೈಗಳನ್ನು ಎತ್ತಿ‌ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾಕ್ಕೆ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಒಂದು ಖಡಕ್ ರೋಲ್ ಮಾಡುತ್ತಿದ್ದಾರೆ.ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು, 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

Visited 1 times, 1 visit(s) today
error: Content is protected !!