ರಾಮ್ ಚರಣ್-ಜಾನ್ವಿ ಕಪೂರ್ ಜೋಡಿಯ “ಪೆದ್ದಿ” ಸಿನಿಮಾದ ಚಿಕಿರಿ ಚಿಕಿರಿ ಸಾಂಗ್ ರಿಲೀಸ್.
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಪೆದ್ದಿ’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಚಿಕಿರಿ ಚಿಕಿರಿ ಎಂಬ ಹಾಡು ಐದು ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ಕನ್ನಡದಲ್ಲಿ ಈ ಗೀತೆಯನ್ನ ಸಂಚಿತ್ ಹೆಗ್ಡೆ ಹಾಡಿದ್ದಾರೆ. ವರದರಾಜು ಚಿಕ್ಕಬಳ್ಳಾಪುರ ಹಾಡಿಗೆ ಸಾಹಿತ್ಯ ಒದಗಿಸಿದ್ದು, ಎಆರ್ ರೆಹಮಾನ್ ಟ್ಯೂನ್ ಹಾಕಿದ್ದಾರೆ. ಚಿಕಿರಿ ಚಿಕಿರಿ ಅಂತಾ ರಾಮ್ ಚರಣ್ ಹೆಜ್ಜೆ ಹಾಕಿದ್ದಾರೆ.

‘ಉಪ್ಪೆನ’ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಒಂದು ಖಡಕ್ ರೋಲ್ ಮಾಡುತ್ತಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು, 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.