ಡಿಸೆಂಬರ್ 3ರಂದು ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ರಿಲೀಸ್

Spread the love

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಫೌಜಿ. ಸೀತಾರಾಮಂ ನಿರ್ದೇಶಕ ಹನು ರಾಘವಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕತ್ತಿ ಹಿಡಿದು ರಕ್ತಸಿಕ್ತ ಅವತಾರದಲ್ಲಿ ಪ್ರಭಾಸ್ ಕಾಣಿಸಿಕೊಂಡಿರುವ ಪೋಸ್ಟರ್ ಮೂಲಕ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಡಿಸೆಂಬರ್ 3 ವಿಶ್ವಾದ್ಯಂತ ಫೌಜಿ ಚಿತ್ರಮಂದಿರಗಳಲ್ಲಿ ದರ್ಶನ ಕೊಡಲಿದೆ.

ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯರ್ನೇನಿ ಮತ್ತು ವೈ. ರವಿ ಶಂಕರ್ ಅವರು ಟಿ-ಸೀರೀಸ್ ಫಿಲ್ಮ್ಸ್‌ನ ಭೂಷಣ್ ಕುಮಾರ್ ಅವರೊಂದಿಗೆ ಜಂಟಿಯಾಗಿ ನಿರ್ಮಿಸಿದ್ದಾರೆ.ಫೌಜಿಯಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಇಮಾನ್ವಿ ಅಭಿನಯಿಸಿದ್ದಾರೆ. ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ಜಯಪ್ರದ, ರಾಹುಲ್ ರವಿಂದ್ರನ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ಈ ಚಿತ್ರದಲ್ಲಿ ಸುದೀಪ್ ಚಟರ್ಜಿ ಅವರ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಅವರ ಸಂಗೀತ, ಅನಿಲ್ ವಿಲಾಸ್ ಜಾಧವ್ ಅವರ ನಿರ್ಮಾಣ ವಿನ್ಯಾಸ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನವಿದೆ.

Visited 1 times, 1 visit(s) today
error: Content is protected !!