ಶ್ರೇಯಾ ಘೋಶಾಲ್ ಕಂಠಸಿರಿಯಲ್ಲಿ “ಬೃಂದಾವಿಹಾರಿ” ಚಿತ್ರದ “ನಾದಸುನಾದ” ಗಾನ

Spread the love

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರದ “ನಾದನಿನಾದ” ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ಈ ಹಾಡನ್ನು ಹೆಸರಾಂತ ಗಾಯಕಿ ಶ್ರೇಯಾ ಘೋಶಾಲ್ ಹಾಡಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದೆ.

ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.

Visited 1 times, 1 visit(s) today
error: Content is protected !!