Cini NewsSandalwood

ಕಿರುಚಿತ್ರದ ಪ್ರೇಮ ಕಥಾನಕ “ಲವ್ ರೀಸೆಟ್”

Spread the love

ಹಿರಿತೆರೆಯಲ್ಲಿ ಮೊದಲ ಚಿತ್ರ ನಿರ್ದೇಶಿಸುವವರು ಮೊದಲು ಕಿರುಚಿತ್ರದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾರೆ. ಎಷ್ಟೋ ಕಿರುಚಿತ್ರಗಳು ಜನರ ಮನಸ್ಸಿಗೆ ಹತ್ತಿರವಾಗಿರುವುದು ಹೌದು. ಅಂತಹ ವಿಭಿನ್ನ ಕಿರುಚಿತ್ರ ” ಲವ್ ರೀಸೆಟ್” ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಗಣೇಶ್ ನಿರ್ದೇಶಿಸಿ, “ಪುಟ್ಟಕ್ಕನ ಮಕ್ಕಳು” ಖ್ಯಾತಿಯ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ನಾಯಕ, ನಾಯಕಿಯಾಗಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. “ಪುಟ್ಟಕ್ಕನ ಮಕ್ಕಳು” ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್ ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್, ನಾನು ಮೂಲತಃ ಐಟಿ ಉದ್ಯೋಗಿ. ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ಅನುರಾಗದ ನೆನಪೀಗ ಕೊನೆಯಾಗಲಿ’ ಎಂಬ ಸುಂದರವಾದ ಹಾಡೊಂದಿದೆ. ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ. ಈ ಹಾಡನ್ನು A2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು. 7 ಶೇಡ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಕಿರುಚಿತ್ರ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

” ಪುಟ್ಟಕ್ಕನ ಮಕ್ಕಳು ” ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸಯಿದೆ. ಈ ಕಿರುಚಿತ್ರದಲ್ಲಿ “ಅಮರ್” ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು. ಕಥೆ ಬಹಳ ಡಿಫರೆಂಟ್ ಆಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ನೋಡಿ ಹಾರೈಸಿ ಎಂದರು ನಾಯಕಿ ಸಂಜನ ಬುರ್ಲಿ. ಛಾಯಾಗ್ರಾಹಕ ಪ್ರಜ್ವಲ್ ಭಾರದ್ವಾಜ್ ಸೇರಿದಂತೆ ಅನೇಕ ತಂತ್ರಜ್ಞರು ಕಿರುಚಿತ್ರದ ಬಗ್ಗೆ ಮಾತನಾಡಿದರು. ರಂಜಿತ್ ಶಂಕರೇಗೌಡ ಸಹ ನಿರ್ದೇಶಕರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

Visited 1 times, 1 visit(s) today
error: Content is protected !!