Cini NewsSandalwood

ಹೋಳಿ ಹಾಡು ಹಾಡಿದ “ಬ್ಯಾಕ್ ಬೆಂಚರ್ಸ್”

ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ” ಬ್ಯಾಕ್ ಬೆಂಚರ್ಸ್” ಚಿತ್ರದಿಂದ ಹೋಳಿ ಹಬ್ಬಕ್ಕಾಗಿ ಸುಮಧುರ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದಿರುವ ಈ ಹಾಡನ್ನು ಭಾರತದ ಹೆಸರಾಂತ ಗಾಯಕ ಶಂಕರ್ ಮಹದೇವನ್ ಹಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಹೋಳಿಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

“ಬ್ಯಾಕ್ ಬೆಂಚರ್ಸ್” ಚಿತ್ರ ನಮ್ಮ ಕಾಲೇಜು ದಿನಗಳನ್ನು ನೆನಪಿಸುತ್ತದೆ. ಈ ಚಿತ್ರದಲ್ಲಿ ಬಹುತೇಕ ಹೊಸಪ್ರತಿಭೆಗಳು ಅಭಿನಯಿಸಿದ್ದಾರೆ.‌ ಆಡಿಷನ್ ಮೂಲಕ ಆಯ್ಕೆಯಾದ ಈ ಕಲಾವಿದರಿಗೆ ಸುಮಾರು ಒಂದು ವರ್ಷಗಳ ಕಾಲ ವರ್ಕ್ ಶಾಪ್ ನಡೆಸಿ ಆನಂತರ ಚಿತ್ರೀಕರಣ ಮಾಡಲಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಬಿ.ಆರ್ ರಾಜಶೇಖರ್ ತಿಳಿಸಿದ್ದಾರೆ.

ಮನೊಹರ್ ಜೋಶಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ರಂಜನ್ ನರಸಿಂಹಮೂರ್ತಿ, ಜಿತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳಿಕರ್, ಮಾನ್ಯ ಗೌಡ, ಕುಂಕುಮ್, ಅನುಷ ಸುರೇಶ್ ಮುಂತಾದವರಿದ್ದಾರೆ.

error: Content is protected !!