Cinisuddi Fresh Cini News 

“ಬನಾರಸ್” ಚಿತ್ರದ ನೂತನ ಪೋಸ್ಟರ್‌ ಬಿಡುಗಡೆ

ಬೆಳ್ಳಿಪರದೆಯ ಮೇಲಿನ ಭರ್ಜರಿಯಾಗಿ ಅಬ್ಬರಿಸಲು ಸಕಲ ಸಿದ್ಧತೆಗಳನ್ನು ಮಾಡಿ ಕುಳಿತಿರುವ ಚಿತ್ರ “ಬನಾರಸ್” ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಈ “ಬನಾರಸ್”.

ಮಕರ ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ” ಬನಾರಸ್ ” ಚಿತ್ರತಂಡ ನೂತನ ಪೋಸ್ಟರ್ ವೊಂದನ್ನು ಅನಾವರಣಗೊಳಿಸುವ ಮೂಲಕ ಸಿನಿರಸಿಕರಿಗೆ‌ ಮಕರ ಸಂಕ್ರಮಣದ ಶುಭಾಶಯ ಹೇಳಿದೆ.

ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ‌ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಈ ಚಿತ್ರದ ಸಂಕಲನ ಮಾಡಿದ್ದಾರೆ.

Related posts