Cinisuddi Fresh Cini News 

ಏ.30 ರಂದು ಬರ್ಕ್ಲಿ ಚಿತ್ರದ ಟೀಸರ್ ಬಿಡುಗಡೆ

ವಿಭಿನ್ನ ಕಥಾಹಂದರ ಹೊಂದಿರುವ “ಬರ್ಕ್ಲಿ” ಚಿತ್ರದ ಅದ್ದೂರಿ ಟೀಸರ್ ಏಪ್ರಿಲ್ 30 ರ ಸಂಜೆ 5 ಗಂಟೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗುತ್ತಿದೆ. ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ‌ ಸಿದ್ದವಾಗಲಿದೆ. ಕರಿಯ, ಗಣಪ, ಕರಿಯ ೨ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ “ಬರ್ಕ್ಲಿ‌”.

ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.” ಬರ್ಕ್ಲಿ” ಎಂದ ಕೂಡಲೇ ಎಲ್ಲರೂ ಸಿಗರೇಟ್ ಒಂದರ ಹೆಸರು ಎಂದುಕೊಳ್ಳುತ್ತಾರೆ. ಆದರೆ ನಮ್ಮ “ಬರ್ಕ್ಲಿ” ಚಿತ್ರಕ್ಕೂ ಸಿಗರೇಟ್ ಗೂ ಯಾವುದೇ ಸಂಬಂಧವಿಲ್ಲ. ನಮ್ಮ ಚಿತ್ರದ ಶೀರ್ಷಿಕೆಯ ಅರ್ಥವೇ ಬೇರೆ ಎನ್ನುತ್ತಾರೆ ನಿರ್ದೇಶಕ ಸುಮಂತ್ ಕ್ರಾಂತಿ.

ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿ ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ.

ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ.

ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Related posts