“ಬೆನ್ನಿ” ಮೋಷನ್ ಪೋಸ್ಟರ್ ನಲ್ಲಿ ಜಿಂಕೆಮರಿ ಶ್ವೇತಾ ವೈಲೆಂಟ್ ಲುಕ್.
ಪೆಪೆ ಸಿನಿಮಾ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ಬೆನ್ನಿ ಸಿನಿಮಾ ಮೂಲಕ ಮಹಿಳಾ ಪ್ರಧಾನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಬಹುಭಾಷಾ ನಟಿ, ಕನ್ನಡದ ಜಿಂಕೆ ಮರಿ ಖ್ಯಾತಿಯ ನಂದಿತಾ ಶ್ವೇತಾ ಈ ಚಿತ್ರದ ನಾಯಕಿ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬೆನ್ನಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಶ್ವೇತಾ ಕಂಪ್ಲೀಟ್ ವೈಲೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ನಿಯ ಹೊಸ ಅವತಾರ ರೂಪ ಕಂಡು ಇವ್ರೇನಾ ಜಿಂಕೆಮರಿ ನಂದಿತಾ ಎನ್ನುತ್ತಿದ್ದಾರೆ ಅಭಿಮಾನಿಗಳು.

ಬೆನ್ನಿ ಚಿತ್ರದಲ್ಲಿ ದಕ್ಷಿಣದ ಭಾರತದ ಪ್ರಮುಖ ನಟರು ಅಭಿನಯಿಸಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ. ಸಂಡೇ ಸಿನಿಮಾಸ್ ಬ್ಯಾನರ್ನಡಿ ರಾಮೇನಹಳ್ಳಿ ಜಗನ್ನಾಥ್ ಚಿತ್ರವನ್ನು ನಿರ್ಮಿಸಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಗುರುಪ್ರಸಾದ್ ನಾರ್ನಾಡ್ ಕ್ಯಾಮರಾವರ್ಕ್ ಮಾಡುತ್ತಿದ್ದಾರೆ. ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಈ ಚಿತ್ರಕ್ಕೆ ಇದೆ.