Customize Consent Preferences

We use cookies to help you navigate efficiently and perform certain functions. You will find detailed information about all cookies under each consent category below.

The cookies that are categorized as "Necessary" are stored on your browser as they are essential for enabling the basic functionalities of the site. ... 

Always Active

Necessary cookies are required to enable the basic features of this site, such as providing secure log-in or adjusting your consent preferences. These cookies do not store any personally identifiable data.

No cookies to display.

Functional cookies help perform certain functionalities like sharing the content of the website on social media platforms, collecting feedback, and other third-party features.

No cookies to display.

Analytical cookies are used to understand how visitors interact with the website. These cookies help provide information on metrics such as the number of visitors, bounce rate, traffic source, etc.

No cookies to display.

Performance cookies are used to understand and analyze the key performance indexes of the website which helps in delivering a better user experience for the visitors.

No cookies to display.

Advertisement cookies are used to provide visitors with customized advertisements based on the pages you visited previously and to analyze the effectiveness of the ad campaigns.

No cookies to display.

Cini NewsSandalwood

“ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆ

ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರದ ಹಾಡುಗಳನ್ನು ಜಯನಗರ ವಿಧಾನಸಭಾ ಸದಸ್ಯರಾದ ಸಿ.ಕೆ.ರಾಮಮೂರ್ತಿ, ಬಿ.ಜೆ.ಪಿ ಮುಖಂಡರಾದ ರೇಣುಕಾಚಾರ್ಯ ಅನಾವರಣ ಮಾಡಿದರು.

ಶಿವಗಂಗೆಯ ಶ್ರೀಮಲಯ ಶಾಂತಮುನಿ ಸ್ವಾಮಿಗಳು ಹಾಗೂ ಶ್ರೀ ಆದಿತ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಡಿ.ಕೆ.ರಾಮಕೃಷ್ಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ.ಹರೀಶ್ ಹಾಗೂ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ ಆರ್ ಕೆ ವಿಶ್ವಾನಾಥ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇನಿಫಿನಿಟಿ ಕ್ರಿಯೇಷನ್ಸ್ ಲಾಂಛನದಲ್ಲಿ ಇಪ್ಪತ್ತು ನಿರ್ಮಾಪಕರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.‌ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ.

ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿದ್ದು, ಪ್ರೇರಣ ಈ ಚಿತ್ರದ ನಾಯಕಿ, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಚಿತ್ರ‌ದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, 2025 ರ ಜನವರಿ ಅಂತ್ಯಕ್ಕೆ ತೆರೆಗೆ ತರಲು ಸಿದ್ದತೆ ನಡೆಯುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

ಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದನ್ನು ಈ ಚಿತ್ರದಲ್ಲಿ ನಿರ್ದೇಶಕರು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು. ನಾಯಕಿ ಪ್ರೇರಣ, ನಿರ್ಮಾಪಕರಾದ ಮಂಜುನಾಥ್,‌ ಕರ್ನಲ್ ರಾಜೇಂದ್ರ, ಶಿವಪ್ಪ ಕುಡ್ಲೂರು, ಆಂಟೋನಿ ರಾಜ್, ಕೃಷ್ಣಮೂರ್ತಿ ಹಾಗೂ ಸಂಗೀತ ನಿರ್ದೇಶಕ ನಾಗ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

error: Content is protected !!