ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್ .
ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ. “ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ ಹುಟ್ಟುಹಬ್ಬ. ಅದೇ ದಿನ ಡೈಮಂಡ್ ಬಟನ್ ದೊರಕಿರುವುದು ಖುಷಿಯ…
Read More