Cinisuddi Fresh Cini News Tv / Serial 

ನನ್ನ ಕನಸಿನ ಚಿತ್ರ “ಬಾಂಡ್ ರವಿ”… ನಿರ್ದೇಶಕ ಪ್ರಜ್ವಲ್. ಎಸ್. ಪಿ

ಬಹಳಷ್ಟು ನಿರೀಕ್ಷಿಯೊಂದಿಗೆ ಬೆಳ್ಳಿ ಪರದೆ ಮೇಲೆ ಬರುತ್ತಿರುವ “ಬಾಂಡ್ ರವಿ” ಚಿತ್ರ ನೋಡುವುದಕ್ಕೆ ಹಲವು ಕಾರಣಗಳಿದೆಯಂತೆ. ಯುವ ನಿರ್ದೇಶಕ ಪ್ರಜ್ವಲ್ ಬಣ್ಣದ ಲೋಕದಲ್ಲಿ ತನ್ನದೇ ಒಂದು ಚಾಪನ್ನ ಮೂಡಿಸಲು ಹಲವು ಕನಸುಗಳನ್ನು ಕಟ್ಟಿಕೊಂಡು ಸುಮಾರು 14 ವರ್ಷಗಳ ಹಿಂದೆ ಸಿನಿಮಾ ರಂಗಕ್ಕೆ ಪಾದರ್ಪಣೆ ಮಾಡಿ ಗೀತೆ ರಚನೆಕಾರ, ಸಹಾಯಕ, ಸಹ ನಿರ್ದೇಶಕರಾಗಿ ಸುಮಾರು 12ಕ್ಕೂ ಚಿತ್ರಗಳಲ್ಲಿ ಕೆಲಸ ಮಾಡಿ ಸಿನಿಮಾ ಬಗ್ಗೆ ಬಹಳಷ್ಟು ವಿಚಾರವನ್ನು ಅರಿತುಕೊಂಡು ಈಗ ಸ್ವತಂತ್ರವಾಗಿ ನಿರ್ದೇಶಕನಾಗಿ “ಬಾಂಡ್ ರವಿ” ಮೂಲಕ ತನ್ನ ಸಾಮರ್ಥ್ಯವನ್ನು ತೋರಿಸಲು ಸಿದ್ಧರಾಗಿದ್ದಾರೆ. ತನ್ನ ಕನಸನ್ನ ನನಸು… Read More
Cinisuddi Fresh Cini News 

“ಕುದ್ರು” ಚಿತ್ರದಲ್ಲಿ ದೆಹಲಿಯ ಬೆಡಗಿ ನಮ್ರತಾ ಮಲ್ಲ ಕುಣಿತ

ಇತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ ನಡೆಯವ ಕಥೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಾನು ಮೂಲತಃ ಉಡುಪಿಯವನು. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ… Read More
Cinisuddi Fresh Cini News 

ಈ ವಾರ ತೆರೆಗೆ ಬರುತ್ತಿದೆ “Dr. 56” ಚಿತ್ರ

ಸ್ಯಾಂಡಲ್ವುಡ್ ನಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿರುವಂತಹ “Dr. 56” ಈ ವಾರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬಹುಶಃ ವೈದ್ಯಕೀಯ ವಿಜ್ಞಾನದ ಕುರಿತು ಆಳಕ್ಕಿಳಿದು ಅಧ್ಯಯನ ಮಾಡಿ ನಿರ್ಮಿಸಿರುವ ಚಿತ್ರ ಇದಾಗಿದೆಯಂತೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ರಾಜ್ಯಗಳಲ್ಲಿ ಏಕಕಾಲಕ್ಕೆ ಇದೇ ಡಿಸೆಂಬರ್‌ 9ರಂದು ಡಾ.56 ತೆರೆಗೆ ಬರುತ್ತಿದೆ. ಹರಿಹರ ಪಿಕ್ಚರ್ಸ್ ಲಾಂಛನದಲ್ಲಿ, ಪ್ರವೀಣ್ ರೆಡ್ಡಿ ನಿರ್ಮಿಸಿ, ರಾಜೇಶ್ ಆನಂದಲೀಲಾ ನಿರ್ದೇಶಿಸುತ್ತಿರುವ ಸಿನಿಮಾ ಡಾ. 56. ಪ್ರಿಯಾಮಣಿ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕ ಪ್ರವೀಣ್ ರೆಡ್ಡಿ ಕತೆ, ಚಿತ್ರಕತೆ, ಬರೆದು ನಿರ್ಮಾಣವನ್ನೂ… Read More
Cinisuddi Fresh Cini News 

FCL ಸೀಸನ್ 9 ಅಪ್ಪು ಫ್ಯಾನ್ಸ್ ಮಡಿಲಿಗೆ

ಸ್ಯಾಂಡಲ್ ವುಡ್ ನ ಫ್ಯಾನ್ಸ್ ಕ್ರಿಕೆಟ್ ಲೀಗ್ ಪಂದ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನಮ್‌ ಟಾಕೀಸ್‌ ರುವಾರಿ ಭರತ್ ನೇತೃತ್ವದಲ್ಲಿ ಫ್ಯಾನ್ಸ್‌ ಕ್ರಿಕೆಟ್‌ ಲೀಗ್ ಸೀಸನ್‌ -9 ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ಸ್ಟಾರ್‌ ಗಳ ಒಂಬತ್ತು ತಂಡಗಳು ಪಂದ್ಯಾಕೂಟದಲ್ಲಿ ಭಾಗಿಯಾಗಿದೆ. ಅಂತಿಮವಾಗಿ ಫೈನಲ್‌ ಪಂದ್ಯದಲ್ಲಿ ಅಪ್ಪು ಫ್ಯಾನ್ಸ್‌ ವಸಿಷ್ಠ ಫ್ಯಾನ್ಸ್‌ ತಂಡವನ್ನು ಮಣಿಸಿ ಈ ಬಾರಿ ಕಪನ್ನು ತನ್ನದಾಗಿಸಿಕೊಂಡಿದೆ. ಪ್ರತಿಬಾರಿಯಂತೆ ಈ ಬಾರಿಯೂ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ಎಲ್ಲರಿಗೂ ನಮ್‌ ಟಾಕೀಸ್‌ ಧನ್ಯವಾದ ವನ್ನು ಸಲ್ಲಿಸುತ್ತದೆ. ನಾವು ಹೀಗೀಗೆ ಕ್ರಿಕೆಟ್‌ ಮಾಡುತ್ತಿದ್ದೇವೆ ಎಂದಾಗ ಮಾಡಿ… Read More
Cinisuddi Fresh Cini News 

“ತನುಜಾ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಸುಧಾಕರ್

ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಶಿವಮೊಗ್ಗದ ಕುಗ್ರಾಮದಿಂದ ಬೆಂಗಳೂರಿಗೆ ಬಂದು ತನುಜಾ ನೀಟ್ ಪರೀಕ್ಷೆ ಬರೆಯುತ್ತಾರೆ. ಆಕೆ ಪರೀಕ್ಷೆ ಬರೆಯಲು ಮುಖ್ಯ ಕಾರಣ ಆಗಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ಪತ್ರಕರ್ತರಾದ ವಿಶ್ವೇಶ್ವರ್ ಭಟ್ ರವರು ಹಾಗೂ ಪ್ರದೀಪ್ ಈಶ್ವರ್. ಇವರೆಲ್ಲರ ಸಹಾಯದಿಂದ ತನುಜಾ ನೀಟ್ ಪರೀಕ್ಷೆ ಬರೆದು, ಇಂದು ಬೆಳಗಾವಿಯಲ್ಲಿ ಎರಡನೇ ವರ್ಷದ ಎಂ.ಬಿ.ಬಿ.ಎಸ್ ಅಭ್ಯಾಸ ಮಾಡುತ್ತಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಹರೀಶ್… Read More
Cinisuddi Fresh Cini News 

ಈ ವಾರ “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ

ವಿಭಿನ್ನ ಕಥೆಯ “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೆ.ಡಿ ನಾಯಕನಾಗಿ, ಶ್ರದ್ದಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ವಿನುತಾ, ‌ನೀನಾಸಂ ಚೇತನ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾ ಶಾಲೆಯ ಪ್ರತಿಭೆಗಳು ಹೆಚ್ಚಾಗಿ ಈ… Read More
Cinisuddi Fresh Cini News 

ತುಳುನಾಡ ದೈವ “ಕೊರಗಜ್ಜ” ಕುರಿತಾದ ಚಿತ್ರದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ನಟ ಕಬೀರ್ ಬೇಡಿ

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. “ಕರಿ ಹೈದ ಕರಿ ಅಜ್ಜ” ಚಿತ್ರದ ತಮ್ಮ ಪಾತ್ರದ ಬಗ್ಗೆ “ಕಬೀರ್ ಬೇಡಿ” ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ… Read More
Cinisuddi Fresh Cini News 

ಜಾಕ್ ಮಂಜು ನಿರ್ಮಾಣದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’

ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ,… Read More
Cinisuddi Fresh Cini News 

ಪಾರ್ಟಿ ಪ್ರಿಯರಿಗಾಗಿ “ಶುಗರ್ ಫ್ಯಾಕ್ಟರಿ” ಸಾಂಗ್ ರಿಲೀಸ್

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು… Read More
Cinisuddi Fresh Cini News 

ಟೀಸರ್ ಮೂಲಕ ಕುತೂಹಲ ಕೆರಳಿಸಿದ ‘ರಾಕ್ಷಸರು’

ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಕ್ಷಸರು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ. ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ‘ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ’ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ.ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಯಶಸ್ವಿ ನಿರ್ಮಾಪಕ ರಮೇಶ್ ಕಶ್ಯಪ್ ‘ಗರುಡಾದ್ರಿ… Read More