Cini NewsSandalwood

ಯುವ ಪಡೆಗಳ ಹೈಪರ್ ರಾಮ್ ಕಮ್ “ಚೌ ಚೌ ಬಾತ್” ಚಿತ್ರದ ಟ್ರೈಲರ್ ಬಿಡುಗಡೆ.

ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಪ್ರಯತ್ನದ ಚಿತ್ರಗಳು ಪ್ರೇಕ್ಷಕರ ಗಮನವನ್ನು ಸೆಳೆದಿದೆ. ಆ ನಿಟ್ಟಿನಲ್ಲಿ ಒಂದಷ್ಟು ಗೆಳೆಯರ ಬಳಗ ಸೇರಿಕೊಂಡು ಪ್ರೇಕ್ಷಕರಿಗೆ “ಚೌ ಚೌ ಬಾತ್” ನೀಡಲು ಮುಂದಾಗಿದ್ದಾರೆ.ಇದು ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಚಿತ್ರವಾಗಿದು , ಕೇಂಜ ಚೇತನ್ ಕುಮಾರ್ ನಿರ್ದೇಶನದ “ಚೌ ಚೌ ಬಾತ್” ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ .ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ.

ಬಿಗ್ ಬಾಸ್‍ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ನಿರ್ದೇಶಕರ ಆತ್ಮೀಯರ ಗೆಳೆಯರಾಗಿದ್ದು , ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ನಿರೂಪಣೆಯನ್ನು ಕೂಡ ಮಾಡಿದರು. ಇನ್ನುಳಿದಂತೆ ಗೀತ ಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ ಬೆಳಗೆರೆ, ಸಾಗರ್ ಗೌಡ, ಪ್ರಕರ್ಷ ಶಾಸ್ತ್ರಿ, ಗೀತಾ ಬಂಗೇರ, ಹರ್ಷವರ್ಧನ್, ಪ್ರಸಾದ್, ನಿಶಾಂತ್ ಶೆಟ್ಟಿ ಸೇರಿದಂತೆ ಚಿತ್ರತಂಡ ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದರು.

ಈಗೊಂದಷ್ಟು ಕಾಲದಿಂದ ಚೌ ಚೌ ಬಾತ್ ಚಿತ್ರ ಸುದ್ದಿ ಕೇಂದ್ರದಲ್ಲಿದೆ. ಇದೀಗ ಬಿಡುಗಡೆಗೊಂಡಿರುವ ಟ್ರೈಲರ್ ಮೂಲಕ ನಿರೀಕ್ಷೆ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ. ಈ ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾ ವಿಶೇಷವಾದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ, “ಚೌ ಚೌ ಬಾತ್” ಕನ್ನಡದ ಮಟ್ಟಿಗೆ ಅನೇಕ ಮೊದಲುಗಳನ್ನು, ಹೊಸತನವನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ.

ಅದು ಕನ್ನಡದ ಮೊಟ್ಟ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಮಾದರಿಯ ಚಿತ್ರವೆಂಬ ಮಾಹಿತಿಯನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ,ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮೂರ್ತಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿರುವ ಈ ಚಿತ್ರದ ಸಂಕಲನದ ಜವಾಬ್ದಾರಿಯನ್ನು ಖುದ್ದು ಕೇಂಜ ಚೇತನ್ ಕುಮಾರ್ ಅವರೇ ನಿಭಾಯಿಸಿದ್ದಾರೆ.

ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

ಇದೊಂದು ವಿಭಿನ್ನ ಕಥಾಹಂದರವಾಗಿದ್ದು , ಸುಂದರವಾಗಿದ್ದು ಮೂರು ಟ್ರ್ಯಾಕ್ ಗಳ ಕಥೆ ಸಾಗಲಿದ್ದು , ಅವೆಲ್ಲವೂ ಒಂದಕ್ಕೊಂದು ಕೊಂಡಿಯಂತೆ ಬೆಸೆದುಕೊಳ್ಳುತ್ತ ಹೋಗುತ್ತದೆ ಅದು ಹೇಗೆ.. ಏನು… ಎಂಬುದನ್ನು ಚಿತ್ರಮಂದಿರದಲ್ಲಿ ನೋಡಬೇಕಂತೆ. ಟೈಲರ್ ನಲ್ಲಿ ಹೊರಬಂದ ಸಂಭಾಷಣೆ ಹಾಗೂ ಹಾಡುಗಳ ತುಣುಕು ಗಮನ ಸೆಳೆಯುವಂತಿದೆ.

ಈ ಚಿತ್ರವನ್ನು ಒಂದಷ್ಟು ಗೆಳೆಯರು , ಸಂಬಂಧಿಕರು ಹಾಗೂ ವಿತರಿಕರಿಗೆ ತೋರಿಸಿದ್ದು , ಒಂದು ಚೀಟಿಯಲ್ಲಿ ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ ಎಂದು ಕೇಳಿದರಂತೆ ನಿರ್ದೇಶಿಕರು. ಅದರಂತೆ ಎಲ್ಲರೂ ಕೂಡ ಚಿತ್ರದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಯನ್ನು ಬರೆದಿಟ್ಟಿದರಂತೆ , ಹಾಗೆಯೇ ವಿತರಕರು ತಾವೇ ಮುಂದೆ ಬಂದು ಚಿತ್ರವನ್ನ ಬಿಡುಗಡೆ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿರುವುದು ನನಗೆ ಮತ್ತಷ್ಟು ಧೈರ್ಯ ಬಂದಿದೆ. ಅತಿ ಶೀಘ್ರದಲ್ಲಿ ಚಿತ್ರವನ್ನ ತೆರೆಯ ಮೇಲೆ ತರುತ್ತೇವೆ ನಿಮ್ಮೆಲ್ಲರ ಸಹಕಾರ ವಿರಲಿ ಎಂದು ನಿರ್ದೇಶಕರು ಕೇಳಿಕೊಂಡು. ಸದ್ಯ ಬಿಡುಗಡೆ ಆಗಿರುವ ಈ ಟ್ರೇಲರ್ ಎಲ್ಲೆಡೆ ವೈರಲ್ ಆಗಿದ್ದು , ಎಲ್ಲರ ಗಮನವನ್ನು ಸೆಳೆಯುತ್ತಿದೆ.

error: Content is protected !!