Cini NewsSandalwood

ಜೂನ್ 26 ರಂದು ಡಿ. ಸತ್ಯಪ್ರಕಾಶ್ ಸಾರಥ್ಯದ “X&Y” ಚಿತ್ರ ಬಿಡುಗಡೆ.

Spread the love

ಸ್ಯಾಂಡಲ್ ವುಡ್ ನಲ್ಲಿ ಬಹಳಷ್ಟು ನಿರೀಕ್ಷೆಯನ್ನ ಮೂಡಿಸಿರುವಂತಹ ಚಿತ್ರ “X&Y”. ಈ ಹಿಂದೆ “ರಾಮಾ ರಾಮಾ ರೇ” ,”ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳ ಮೂಲಕ ಜನಪ್ರಿಯರಾದವರು ಖ್ಯಾತಿಯ ನಿರ್ದೇಶಕ ಡಿ.ಸತ್ಯಪ್ರಕಾಶ್ . ಪ್ರಸ್ತುತ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ಚಿತ್ರ “X&Y”. ಇತ್ತೀಚೆಗೆ ಈ ಚಿತ್ರದ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಸತ್ಯಪ್ರಕಾಶ್, ವಿಭಿನ್ನ ಕಥಾಹಂದರ ಹೊಂದಿರುವ ” X&Y”, ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಚಿತ್ರದ ಮತ್ತೊಂದು ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೊದಲ ಬಾರಿಗೆ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ.

ನಾನು ಚೆನ್ನಾಗಿ ನಟಿಸಿದ್ದೇನೆ ಎಂದರೆ ಅದಕ್ಕೆ ಕಾರಣ ಈ ಚಿತ್ರದಲ್ಲಿ ನಟಿಸಿರುವ ಅನುಭವಿ ಕಲಾವಿದರು. ಅವರನೆಲ್ಲಾ ನೋಡಿ ನಾನು ಅಭಿನಯ ಕಲಿತ್ತಿದ್ದೇನೆ. ಇನ್ನೂ ಕೌಶಿಕ್ ಹರ್ಷ ಸಂಗೀತ ನೀಡಿರುವ ಹಾಡುಗಳಂತೂ ಒಂದಕ್ಕಿಂತ ಒಂದು ಮಧುರವಾಗಿದೆ. ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜ್ ಸಂಕಲನ ನಮ್ಮ‌ ಚಿತ್ರದ ಹೈಲೆಟ್. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನೂ ನಾನೇ ಬರೆದಿದ್ದೇನೆ.‌

ಎಲ್ಲಾ ವೈದ್ಯಕೀಯ ಸೌಲಭ್ಯಗಳಿರುವ “ಆಂಬೋ ಆಟೋ” ಸಹ ಈ ಚಿತ್ರದ ಮಖ್ಯ ಪಾತ್ರಧಾರಿ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ನಮ್ಮ “X&Y” ಚಿತ್ರ ಈ ಮಾತನ್ನು ದೂರ ಮಾಡಲಿದೆ. ಅಂತಹ ಕಥಾಹಂದರ ನಮ್ಮ ಚಿತ್ರ ಹೊಂದಿದೆ. ಜೂನ್ 26 ರ ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ತಿಳಿಸಿದರು‌. ಅತಿಥಿಗಳಾಗಿ ಆಗಮಿಸಿದ್ದ ವಿ.ಮನೋಹರ್ ಅವರಿಗೆ ಹಾಗೂ ಚಿತ್ರತಂಡಕ್ಕೆ ಡಿ.ಸತ್ಯಪ್ರಕಾಶ್ ಧನ್ಯವಾದ ಹೇಳಿದರು.

ಇಂತಹ ಲವಲವಿಕೆಯಿಂದ ಕೂಡಿರುವ ತಂಡದ ಜೊತೆಗೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಕಥೆ ಕೇಳಿದ ತಕ್ಷಣ ಇಷ್ಟವಾಯಿತು. ಕೃಪ ನನ್ನ ಪಾತ್ರದ ಹೆಸರು ಎಂದರು ನಟಿ ಬೃಂದಾ ಆಚಾರ್ಯ. ಹಾಡುಗಳು ಹಾಗೂ ಹಾಡಿದವರ ಬಗ್ಗೆ ಸಂಗೀತ ನಿರ್ದೇಶಕ ಹರ್ಷ ಕೌಶಿಕ್ ಮಾಹಿತಿ ನೀಡಿದರು.

ಚಿತ್ರದಲ್ಲಿ ನಟಿಸಿರುವ ಧರ್ಮಣ್ಣ, ಸುಂದರ್, ಅಥರ್ವ ಪ್ರಕಾಶ್, ಹರಿಣಿ, ಆಯನಾ ಮುಂತಾದವರು ತಮ್ಮ ಪಾತ್ರ ಹಾಗೂ ಚಿತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಲವಿತ್, ಸಂಕಲನಕಾರ ಬಿ.ಎಸ್.ಕೆಂಪರಾಜ್ ಮುಂತಾದ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ವಿ.ಮನೋಹರ್ ಅವರು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಟಿ ಬೃಂದಾ ಆಚಾರ್ಯ ಅವರೆ ಕಾರ್ಯಕ್ರಮವನ್ನು ನಿರೂಪಿಸಿದ್ದು ವಿಶೇಷವಾಗಿತ್ತು.

Visited 1 times, 1 visit(s) today
error: Content is protected !!