Cini NewsSandalwood

“ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ “ದೇಸಾಯಿ”

Spread the love

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ “ದೇಸಾಯಿ” ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

“ದೇಸಾಯಿ” ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಉತ್ತರ ಕರ್ನಾಟಕದ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ನಾಗಿರೆಡ್ಡಿ ಭಡ ಅವರದು. ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

“ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. “ಒರಟ” ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ “ದೇಸಾಯಿ” ಮೊದಲ ನಿರ್ಮಾಣದ ಚಿತ್ರ.

Visited 1 times, 1 visit(s) today
error: Content is protected !!