“ವಸುದೈವ ಕುಟುಂಬಕಂ” ಚಿತ್ರಕ್ಕೆ ಮತ್ತೆ ಜೊತೆಯಾದ ಧ್ರುವ ಸರ್ಜಾ – ನಂದ ಸುಧೀರ್

Spread the love

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಘೋಷಣೆಯಾಗಿದೆ. ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಅವರು ನಿರ್ಮಿಸುತ್ತಿರುವ, ಬಿ.ಎಸ್ ಸುಧೀಂದ್ರ ಅವರ ಸಹ ನಿರ್ಮಾಪಕರಾಗಿರುವ ಹಾಗೂ ನಂದ ಸುಧೀರ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ “ವಸುದೈವ ಕುಟುಂಬಕಂ” ಎಂದು ಹೆಸರಿಡಲಾಗಿದೆ. “ಪೊಗರು” ಚಿತ್ರದ ನಂತರ ಧ್ರುವ ಸರ್ಜಾ ಹಾಗೂ ನಂದ ಸುಧೀರ್ ಕಾಂಬಿನೇಶನ್ ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ನಂದಕಿಶೋರ್ ಅವರು ನಂದ ಸುಧೀರ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

 

“ವಸುದೈವ ಕುಟುಂಬಕಂ”, ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಲವ್, ಆಕ್ಷನ್, ಸೆಂಟಿಮೆಂಟ್ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿರುತ್ತದೆ. ಧ್ರುವ ಸರ್ಜಾ ಅವರ ಅಭಿನಯದ ಚಿತ್ರದ ಹಾಡುಗಳು ಜನಪ್ರಿಯವಾಗಿದೆ. ಈ ಚಿತ್ರದಲ್ಲೂ ಸಹ ಸುಮಧುರ ಗೀತೆಗಳಿರುತ್ತದೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಸತ್ಯ ಹೆಗ್ಡೆ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನವಿರುವ “ವಸುದೈವ ಕುಟುಂಬಕಂ” ಚಿತ್ರದಲ್ಲಿ ಹೆಸರಾಂತ ಹಾಗೂ ಅನುಭವಿ ಕಲಾವಿದರ ಬಹುದೊಡ್ಡ ತಾರಾಬಳಗವಿರುತ್ತದೆ‌‌. ಮುಂದಿನ ದಿನಗಳಲ್ಲಿ ಈ ಕುರಿತು ಹೆಚ್ಚಿನ ಮಾಹಿತಿ ಸಿಗಲಿದೆ.

Visited 1 times, 1 visit(s) today
error: Content is protected !!