Cinisuddi Fresh Cini News 

“ಫ್ಯಾಮಿಲಿ ಪ್ಯಾಕ್” ಚಿತ್ರೀಕರಣ ಸ್ಥಳಕ್ಕೆ ‘ಪವರ್’ ದಂಪತಿ ಭೇಟಿ

ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣ ವಾಗುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರಿನ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರ ಚಟುವಟಿಕೆಗಳು ಭರದಿಂದ ಸಾಗಿದೆ. ಚಿತ್ರೀಕರಣದ ಕೊನೆಯ ದಿವಸ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ, ಚಿತ್ರೀಕರಣ ವೀಕ್ಷಿಸಿದಲ್ಲದೇ, ಚಿತ್ರತಂಡದ ಪ್ರತಿಯೊಬ್ಬ ಸದಸ್ಯರ ಕಾರ್ಯವನ್ನು ಶ್ಲಾಘಿಸಿ, ಶುಭ ಕೋರಿದ್ದಾರೆ.

ನಾಯಕ ಲಿಖಿತ್ ಶೆಟ್ಟಿ, ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಪದ್ಮಜಾರಾವ್, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮುಂದಿನ ಕಲಾವಿದರು ಅಂದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ .

ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ “ಫ್ಯಾಮಿಲಿ ಪ್ಯಾಕ್” ನ ನಿರ್ದೇಶಕ. ನಿರ್ಮಾಪಕ ಲಿಖಿತ್ ಶೆಟ್ಟಿ ಅವರು ಈ ಚಿತ್ರದ ನಾಯಕ ಕೂಡ. ಅಮೃತ ಅಯ್ಯಂಗಾರ್ ನಾಯಕಿ. ರಂಗಾಯಣ ರಘು, ಅಚ್ಯುತಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ. ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆದಿದ್ದಾರೆ.

 

Related posts