Cinisuddi Fresh Cini News 

“ಫ್ಯಾಮಿಲಿ ಪ್ಯಾಕ್”ನ ಮೋಷನ್ ಪೋಸ್ಟರ್ ಬಿಡುಗಡೆ

ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ. ಆರ್. ಕೆ. ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ “ಫ್ಯಾಮಿಲಿ ಪ್ಯಾಕ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರು. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ .ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಮುಂತಾದವರಿದ್ದಾರೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಉದಯಲೀಲ ಅವರ ಛಾಯಾಗ್ರಹಣವಿದೆ.
ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆಯುತ್ತಿದ್ದಾರೆ.

Related posts