ಶ್ರೇಯಸ್ ಮಂಜು ನಟನೆಯ “ದಿಲ್‌ದಾರ್” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ

Spread the love

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್’. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ.

ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಪ್ರಯತ್ನಿಸಿದೆ. ಈ ಹಿಂದೆಯೇ ಶ್ರೇಯಸ್ ಮಂಜು ಈ ಹಿಂದೆಂದೂ ಕಾಣಿಸಿಕೊಂಡಿರದಿದ್ದ ಪಾತ್ರದಲ್ಲಿ ನಟಿಸಿದ್ದಾರೆಂದು ಚಿತ್ರತಮಡ ಹೇಳಿಕೊಂಡಿತ್ತು. ಅದರ ಚಹರೆ ಈ ಟೀಸರ್ ಮೂಲಕ ಅನಾವರಣಗೊಂಡಿದೆ.

ಇದು ಭಿನ್ನವಾದೊಂಣದು ಪ್ರೇಮ ಕಥಾನಕವನ್ನೊಳಗೊಂಡಿರೋ ಪಕ್ಕಾ ಆಕ್ಷನ್ ಚಿತ್ರವೆಂಬ ಬಗ್ಗೆ ಚಿತ್ರತಂಡ ಹೇಳಿಕೊಂಡಿದೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ.

ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್ ಕರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ದಿಲ್ ದಾರ್ ಕುರಿತಾದ ಮತ್ತಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಪ್ರೇಕ್ಷಕರನ್ನು ತಲುಪಲಿವೆ.

Visited 1 times, 1 visit(s) today
error: Content is protected !!