Cini NewsSandalwood

ಕಮಲ್‌ ಹಾಸನ್-ಮಣಿರತ್ನಂ ಜೋಡಿಯ ʼಥಗ್‌ ಲೈಫ್‌ʼ ಸಿನಿಮಾದ ಮೊದಲ ಹಾಡು ರಿಲೀಸ್

Spread the love

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಥಗ್‌ ಲೈಫ್.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

ಥಗ್‌ ಲೈಫ್‌ ಚಿತ್ರದ ಜಿಂಗುಚ್ಚಾ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಒದಗಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಎಲ್ಲರನ್ನೂ ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ‌. ಚೆನ್ನೈನಲ್ಲಿ ನಡೆದ ಪ್ಯಾ‌ನ್ ಇಂಡಿಯಾದ ಪ್ರೆಸ್ ಮೀಟ್ ವೇದಿಕೆಯಲ್ಲಿ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು..

ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ತಯಾರಾಗಿದೆ. ಚಿತ್ರದ ತಾರಾಗಣ ಕಮಲ್ ಹಾಸನ್, ಸಿಲಂಬರಸನ್ ಟಿಆರ್, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್ ಮತ್ತಿತರ ನಟರನ್ನು ಒಳಗೊಂಡಿದೆ. ಈ ಬಹು ನಿರೀಕ್ಷಿತ ಚಿತ್ರಕ್ಕೆ ದಿಗ್ಗಜ ಎ.ಆರ್. ರೆಹಮಾನ್ ಅವರ ಸಂಗೀತವಿದೆ.

ಈ ಚಿತ್ರದ ಕತೆ, ಚಿತ್ರಕತೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನದಲ್ಲಿ ರವಿ ಆರ್ ಚಂದ್ರನ್ ಅವರ ಸಿನಿಮಾಟೋಗ್ರಫಿ, ಅನ್ಬರಿವ್ ಅವರ ಆ್ಯಕ್ಷನ್ ಕೋರಿಯಾಗ್ರಫಿ ಈ ಚಿತ್ರಕ್ಕಿದೆ. ಥಗ್‌ ಲೈಫ್‌ ಚಿತ್ರದ ಒಟಿಟಿ ಹಕ್ಕು ನೆಟ್‌ ಫ್ಲಿಕ್ಸ್‌ ಪಾಲಾಗಿದ್ದು, ಆಡಿಯೋ ಹಕ್ಕನ್ನು ಸರೆಗಮ ತನ್ನದಾಗಿಸಿಕೊಂಡಿದೆ.

ವಿತರಣಾ ಪಾಲುದಾರರು :
ಥಗ್ಸ್‌ ಲೈಫ್‌ ಸಿನಿಮಾವನ್ನು ತಮಿಳುನಾಡಿನಲ್ಲಿ ರೆಡ್ ಜೈಂಟ್ ಮೂವೀಸ್ ವಿತರಣೆ ಜವಾಬ್ದಾರಿ ಹೊತ್ತುಕೊಂಡಿದೆ. ಓವರ್‌ ಸೀಸ್‌ ನಲ್ಲಿ ಹೋಮ್ ಸ್ಕ್ರೀನ್ ಎಂಟರ್‌ಟೈನ್‌ಮೆಂಟ್ ಸಹಯೋಗದೊಂದಿಗೆ ಎಪಿ ಇಂಟರ್‌ನ್ಯಾಷನಲ್ ವಿತರಣೆ ಮಾಡುತ್ತಿದ್ದು, ಉತ್ತರ ಭಾರತದಲ್ಲಿ ಪೆನ್ ಮರುಧರ್ ಸಿನಿ ಎಂಟರ್‌ಟೈನ್‌ಮೆಂಟ್, ಆಂಧ್ರಪ್ರದೇಶ ಮತ್ತು ತೆಲಂಗಾಣನಲ್ಲಿ ಶ್ರೇಷ್ಠ್ ಮೂವೀಸ್ ಹಾಗೂ ಫೈವ್ ಸ್ಟಾರ್ ಸೆಂಥಿಲ್ ಕರ್ನಾಟಕದಲ್ಲಿ ಕಮಲ್‌ ಹಾಸನ್ ಚಿತ್ರ ವಿತರಣೆ ಮಾಡಲಿದೆ.

First song of Kamal Haasan-Maniratnam duo’s ‘Thug Life’ movie released

Visited 1 times, 1 visit(s) today
error: Content is protected !!