Cinisuddi Fresh Cini News 

ಬಹುತೇಕ ಚಿತ್ರೀಕರಣ ಮುಗಿಸಿದ ‘ಗೀತಾ’ ಟೀಮ್

ನಿರ್ಮಾಪಕರಾದ ಸೈಯದ್ ಸಲಾಂ ಮತ್ತು ಶಿಲ್ಪಾ ಗಣೇಶ್ ಅವರ ಬ್ಯಾನರ್ ಗಳಾದ ಎಸ್ ಎಸ್ ಫಿಲ್ಮ್ ಮತ್ತು ಗೋಲ್ಡನ್ ಮೂವೀಸ್ ಅಡಿಯಲ್ಲಿ ಜಂಟಿಯಾಗಿ ನಿರ್ಮಿಸುತ್ತಿರುವ ಗೀತಾ ಚಿತ್ರದ ಮಾತಿನ ಚಿತ್ರೀಕರಣ ಮನಾಲಿ ,ಕೊಲ್ಕತ್ತಾ, ಮೈಸೂರು , ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ಚಿತ್ರೀಕರಣ ಮುಗಿದಿದ್ದು ಇನ್ನೂ ಎರಡು ಹಾಡುಗಳು ಮಾತ್ರ ಬಾಕಿ ಉಳಿದಿದೆ ….

ಗೋಲ್ಡನ್ ಸ್ಟಾರ್ ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್ , ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ ..ಮಿಸ್ಟರ್ ಚಿಟಿಜ ಮಿಸೆಸ್ ರಾಮಾಚಾರಿ ಮತ್ತು ರಾಜಕುಮಾರ ಚಿತ್ರದ ಸಹ ನಿರ್ದೇಶಕರು ಮತ್ತು ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದ ವಿಜಯ್ ನಾಗೇಂದ್ರ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ . ಖ್ಯಾತ ಸಂಗೀತ ನಿರ್ದೇಶಕ ಅನುಪ್ ರೂಬೆನ್ಸ್ ಈ ಚಿತ್ರಕ್ಕೆ ಸಂಗೀತವನ್ನು ನೀಡುತ್ತಿದ್ದಾರೆ …..ಶ್ರೀಶ ಕುಂದ್ರಳ್ಳಿ ಅವರ ಛಾಯಾಗ್ರಹಣವಿದೆ .

Share This With Your Friends

Related posts