Cini NewsSandalwood

ಅ.18 ರಂದು ಮೈಸೂರಿನಲ್ಲಿ “ಘೋಸ್ಟ್” ಮೆರವಣಿಗೆ

Spread the love

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ.

ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.

ಜ್ವಾಲಾಮುಖಿ ಡಾ||ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್ ಲ್ಯಾಂಡ್ಸ್ ಚಿತ್ರಮಂದಿರ ತಲುಪಲಿದೆ. ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ನಿರ್ಮಾಪಕರಾದ ಸಂದೇಶ್ ಮುಂತಾದವರು ಈ ಅದ್ದೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ “ಘೋಸ್ಟ್” ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ

Visited 1 times, 1 visit(s) today
error: Content is protected !!