ನಾಳೆಯಿಂದ ಧನಂಜಯ್ ಅಭಿನಯದ 25 ನೇ ಚಿತ್ರ ‘ಗುರುದೇವ್ ಹೊಯ್ಸಳ’ ಚಿತ್ರ ಬಿಡುಗಡೆ.
ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ ‘ಗುರುದೇವ್ ಹೊಯ್ಸಳ’ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.’ ಗುರುದೇವ್ ಹೊಯ್ಸಳ’ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ ಗುರುದೇವ್ ಹೊಯ್ಸಳ ಎಂಬ ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕಳೆದ ವಾರ ಕಿಚ್ಚ ಸುದೀಪ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಸಾಕಷ್ಟು ಹೆಚ್ಚಿದೆ. ಇದೊಂದು ಉತ್ತರ ಕರ್ನಾಟಕ ಭಾಷೆಯ ಸೊಗಡಿನ ಚಿತ್ರವಾಗಿದ್ದು, ಬಹುತೇಕ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ಆಗಿದೆ.
ವಿಜಯ್ ಕಿರಗಂದೂರು ಅರ್ಪಿಸುವ,
ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರವನ್ನು ವಿಜಯ್ ಎನ್ ನಿರ್ದೇಶಿಸಿದ್ದಾರೆ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
ಧನಂಜಯ್ ಅವರಿಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್, ರಘು ಶಿವಮೊಗ್ಗ, ಅನಿರುದ್ಧ್ ಭಟ್, ಮಯೂರಿ ನಟರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.