Cini NewsSandalwoodTV Serial

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ನೂತನ ಚಿತ್ರದ ಶೀರ್ಷಿಕೆ “ಬೃಂದಾವಿಹಾರಿ”.

Spread the love

ಯುಗಾದಿ ಹಬ್ಬದ ಸಂದರ್ಭದಲ್ಲಿ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ ಚಿತ್ರದ ಶೀರ್ಷಿಕೆ ಅನಾವರಣ.

ಸೂಪರ್ ಹಿಟ್ ” ಕೃಷ್ಣಂ ಪ್ರಣಯ ಸಖಿ” ಚಿತ್ರದ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಹೊಸಚಿತ್ರವೊಂದು ಆರಂಭವಾಗಿತ್ತು. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸದಭಿರುಚಿ ಚಿತ್ರಗಳ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಪ್ರಸ್ತುತ ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ರೊಮ್ಯಾಂಟಿಕ್ ಜಾನರ್ ನ ಈ ಚಿತ್ರಕ್ಕೆ “ಬೃಂದಾವಿಹಾರಿ” ಎಂದು ಹೆಸರಿಡಲಾಗಿದೆ. ಈ ಸುಂದರ ಶೀರ್ಷಿಕೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ “ಬೃಂದಾವಿಹಾರಿ” ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ. ಗಣೇಶ್ ಹಾಗೂ ಶ್ರೀನಿವಾಸರಾಜು ಅವರ‌ ಕಾಂಬಿನೇಶನ್ ಚಿತ್ರ ಎಂದ ಮೇಲೆ ಹಾಡುಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇರುತ್ತದೆ.

ಖ್ಯಾತ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ನಿರ್ದೇಶಕ ಶ್ರೀನಿವಾಸರಾಜು ಅವರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣವಿದೆ.

Visited 1 times, 1 visit(s) today
error: Content is protected !!