Cini NewsSandalwood

“ಜಾಕಿ-42” ಚಿತ್ರದಲ್ಲಿ ಕಿರಣ್ ರಾಜ್ ಗೆ ಹೃತಿಕಾ ಶ್ರೀನಿವಾಸ್ ನಾಯಕಿ

Spread the love

ಗುರುತೇಜ್ ಶೆಟ್ಟಿ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ. ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ “ಜಾಕಿ-42” ಚಿತ್ರಕ್ಕೆ ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ಆಯ್ಕೆ ಯಾಗಿದ್ದಾರೆ. ಮಾಡರ್ನ್ ಹಾಗೂ ಹೋಮ್ಲಿ ಎರಡು ಶೇಡ್ ಇರುವ ಪಾತ್ರ ಇದಾಗಿದೆ.

ಹೃತಿಕ ಶ್ರೀನಿವಾಸ್, ಯೋಗರಾಜ್ ಭಟ್ ಸಿನಿಮಾಸ್ ಹಾಗೂ ರವಿ ಶಾಮನೂರು ನಿರ್ಮಾಣದ “ಉಡಾಳ” ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ಬ್ಯುಸಿ ಆಗಿರುವ ಅವರು ಸದ್ಯದಲ್ಲೇ “ಜಾಕಿ-42” ಚಿತ್ರ ತಂಡ ಸೇರಿಕೊಳ್ಳಲಿದ್ದಾರೆ.

“ಜಾಕಿ-42” ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆ. ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ ಈ ಚಿತ್ರ ನಿರ್ಮಿಸುತ್ತಿದ್ದಾರೆ. ತೆಲುಗು ಹಾಗೂ ತಮಿಳಿನ ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ವಿನೋದ್ ಯಜಮಾನಿ “ಜಾಕಿ 42” ಗೆ ಸಂಗೀತ ನೀಡುತ್ತಿದ್ದಾರೆ.

ತಂತ್ರಜ್ಞರ ತಂಡದಲ್ಲಿ ರಾಘವೇಂದ್ರ ಬಿ ಕೋಲಾರ್, ಉಮೇಶ್ ಆರ್ ಬಿ, ಸತೀಶ್ ಪೆರ್ಡೂರು ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗಿನ ಹೆಸರಾಂತ ಕಲಾವಿದರು ತಾರಾಗಣದಲ್ಲಿದ್ದಾರೆ. ಈಗಾಗಲೇ ಹಾರ್ಸ್ ರೇಸ್ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನೆಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.

Visited 2 times, 1 visit(s) today
error: Content is protected !!