Cini NewsSandalwood

ಕೃಷ್ಣ ಬೆಳ್ತಂಗಡಿ ಸಾರಥ್ಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ “ಇದು ನಮ್ ಶಾಲೆ”

ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 15 ದಿನಗಳ ಕಾಲ ನಿರಂತರವಾಗಿ ನಡೆಯಿತು.’

ಕೃಷ್ಣ ಬೆಳ್ತಂಗಡಿ ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ರವಿ ಆಚಾರ್ ಹಾಗೂ ಉಮೇಶ್ ಆಚಾರ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.

ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಶೀಘ್ರವೇ ನಡೆಯಲಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

error: Content is protected !!