Cinisuddi Fresh Cini News 

‘ಇಂದಿರಾ’ ಟೈಟಲ್ ಪೋಸ್ಟರ್ ರಿಲೀಸ್ ಮಾಡಿದ ಪವರ್ ಸ್ಟಾರ್

ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ನಡಿ ಹೊಸ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ಸಮುದ್ರಂ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ಇಂದಿರಾ ಸಿನಿಮಾ ಅನೌನ್ಸ್ ಮಾಡಲಾಗಿದೆ.

ಇಂದಿರಾ ಚಿತ್ರದ ಟೈಟಲ್ ಪೋಸ್ಟರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದ್ದು, ಒಂದು ಆಕ್ಸಿಡೆಂಟ್ ಸುತ್ತ ಇಡೀ ಕಥೆ ಸುತ್ತಲಿದೆ.

ರಿಷಿಕೇಶ್ ಚಿತ್ರ್ಕಕೆ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಅನಿತಾ ಭಟ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಕುರುಡಿಯಾಗಿ ಮರೆಗುಳಿ ಕಾಯಿಲೆ ಇರುವ ಪಾತ್ರಕ್ಕೆ ಅನಿತ ಭಟ್ ಜೀವತುಂಬುತ್ತಿದ್ದಾರೆ. ಶಫಿ, ನೀತೂ ಶೆಟ್ಟಿ, ಎಸ್ ಜೆ ಕಾರ್ತಿಕ್ ಗೌಡ, ರೆಹಮಾನ್ ಹಾಸನ್, ಚಕ್ರವರ್ತಿ ಚಂದ್ರಚೂಡ್ ಚಿತ್ರದ ಮುಖ್ಯ ತಾರಾಬಳಗದಲ್ಲಿದ್ದಾರೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಅನಿತಾ ಭಟ್ ಹಾಗೂ ಸಹ ನಿರ್ಮಾಪಕರಾಗಿ ಪ್ರಜ್ಞಾನಂದ ಸೊರಬ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರ್ದೇಶನದ ಜೊತೆಗೆ ರಿಷಿಕೇಶ್ ಚಿತ್ರದ ಛಾಯಾಗ್ರಹಣ, ಸಂಕಲನ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲೋಹಿತ್ ಎಲ್ ನಾಯಕ್ ಸಂಗೀತ ನಿರ್ದೇಶನ, ಅಭಿಷೇಕ್ ಮಠದ್ ನೃತ್ಯ ನಿರ್ದೇಶನವಿದೆ.

Related posts