Cini NewsSandalwood

ಹೊಸಬರ ಮರ್ಡರ್ ಮಿಸ್ಟ್ರಿಯ “ಇತ್ಯಾದಿ” ಬಿಡುಗಡೆಗೆ ಸಿದ್ದ.

ನೈಜ್ಯ ಘಟನೆಗಳನ್ನು ಆಧಾರವಾಗಿಟ್ಟು ಕೊಂಡು ಯುವ ಪಡೆಗಳ ಬಳಗ ಸಸ್ಪೆನ್ಸ್ , ಮರ್ಡರ್ ಮಿಸ್ಟ್ರಿ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಸಿದ್ದರಾಗಿದ್ದಾರೆ. “ಇತ್ಯಾದಿ” ಎಂಬ ಟೈಟಲ್ ಮೂಲಕ ಚರಣ್‌ ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡಿರುವ ಈ ಸಿನಿಮಾಗೆ ಡಿ.ಯೋಗರಾಜ್ ನಿರ್ದೇಶನ ಮಾಡಿದ್ದಾರೆ.

ಇದೊಂದು ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದ್ದು, ಶೇಕಡ ೭೫ರಷ್ಟು ಕಾಲ್ಪನಿಕ, ಉಳಿದವು ಸತ್ಯ ಘಟನೆಯಾಗಿರುತ್ತದೆ. ಶೃಂಗೇರಿ ಬಳಿ ಇರುವ ಬಿಳಿಗದ್ದೆ ಎಂಬ ಊರಿನಲ್ಲಿ ಕಲ್ಲು ದೇವರು ಇರುತ್ತದೆ. ಅದಕ್ಕೆ ತಾಯಿ ಹೊಟ್ಟೆಯಲ್ಲಿ ಹುಟ್ಟಬೇಕೆಂಬ ಆಸೆಯಾಗಿರುತ್ತದೆ. ಅದು ಕೊನೆಗೂ ಕಲ್ಲಾಗೇ ಹುಟ್ಟಿಕೊಂಡಿರುತ್ತದೆ.

ಊರಿನಲ್ಲಿರುವ ಗರ್ಭಣಿಯರು ಆ ಜಾಗಕ್ಕೆ ಹೋಗಿ ಪೂಜೆ ಮಾಡಿಕೊಂಡು ಬಂದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇರುತ್ತದೆ. ಆದರೆ ಅಲ್ಲಿಗೆ ಹೋದವರೆಲ್ಲಾ ಕೊಲೆಯಾಗುತ್ತಿರುತ್ತಾರೆ. ಇದನ್ನು ಮಾಡುವವರು ಯಾರು? ಯಾಕೆ ನಡೀತಾ ಇದೆ? ಎಂಬುದನ್ನು ಕುತೂಹಲಕಾರಿಯಾಗಿ ತೋರಿಸಲಾಗಿದೆ. ಶೃಂಗೇರಿ, ಚಿಕ್ಕಮಗಳೂರು, ಆಗುಂಬೆ ಸುಂದರ ತಾಣಗಳಲ್ಲಿ 62 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಅಂತ ಮಾಹಿತಿ ತೆರೆದಿಟ್ಟರು.

ಹಾಗೆಯೇ ನಿರ್ದೇಶಕರು ಈ ಚಿತ್ರಕ್ಕಾಗಿ ಪಟ್ಟ ಶ್ರಮದ ವಿಚಾರದ ಜೊತೆಗೆ ನಾಯಕ ಸೇರಿದಂತೆ ಕೆಲವು ಕಲಾವಿದರಿಗೆ ತಮ್ಮ ಕೆಲಸದಲ್ಲಿ ನಿಷ್ಠೆ , ಸಮಯಪ್ರಜ್ಞೆ ಎಷ್ಟು ಮುಖ್ಯ ಎಂದು ಬುದ್ಧಿ ಮಾತನ್ನ ಹೇಳುವ ಮೂಲಕ ಅವರ ಅಭಿನಯವನ್ನು ಕೂಡ ಮೆಚ್ಚಿಕೊಂಡಾಡಿದರು. ಇನ್ನು ಈ ಚಿತ್ರದಲ್ಲಿ ಬಹುತೇಕ ಯುವ ಪ್ರತಿಭೆಗಳ ಅಭಿನಯಿಸಿದ್ದು , ಸಚ್ಚಿನ್ ನಾಯಕ. ಡಾ.ಸೌಮ್ಯ ನಾಯಕಿ. ಮತ್ತೋಂದು ಮುಖ್ಯ ಪಾತ್ರದಲ್ಲಿ ಮಹೇಶ್.ಬಿ., ಅರ್ಚನಾ ಉದಯಕುಮಾರ್. ತಾರಾಗಣದಲ್ಲಿ ಆಂಜನಪ್ಪ, ತಮಿಳು ಖ್ಯಾತ ನಟ ಶಿವರಾಜ್, ಮಂಜುಳಾ ವೆಂಕಟೇಶ್, ಮಣಿ ಮುಂತಾದವರು ನಟಿಸಿದ್ದಾರೆ. ಎರಡು ಹಾಡುಗಳಿಗೆ ಸಂಗೀತ ಪುಣ್ಯೇಶ್, ಛಾಯಾಗ್ರಹಣ ಭರಣಿ-ಡಿ.ಯೋಗರಾಜ್-ಲಕ್ಷೀಕಾಂತ್, ಸಂಕಲನ ಸಂತೋಷ್ ನಿರ್ವಹಿಸಿದ್ದಾರೆ. ಸೆನ್ಸಾರ್‌ನಿಂದ ಪ್ರಶಂಸೆಗೆ ಒಳಪಟ್ಟಿರುವ ಸಿನಿಮಾವು ಇದೇ ತಿಂಗಳು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತದೆ.

error: Content is protected !!