Cinisuddi Fresh Cini News 

ಮಿನರ್ವ ಮಿಲ್ ನಲ್ಲಿ ‘ಕಬ್ಜ’ ಚಿತ್ರದ 5ನೇ ಹಂತದ ಚಿತ್ರೀಕರಣ

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಹವಾ ಕ್ರಿಯೇಟ್ ಮಾಡಿರುವ ಮಲ್ಟಿಸ್ಟಾರ್ ಅಭಿನಯದ “ಕಬ್ಜ” ಚಿತ್ರದ ಐದನೇ ಹಂತದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ಭರ್ಜರಿಯಾಗಿ ಆರಂಭಗೊಂಡಿದೆ.ಸ್ಟಾರ್ ನಿರ್ದೇಶಕ ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ದೊಡ್ಡ ದೊಡ್ಡ ಕಲಾವಿದರ ಸಮಾಗಮವೇ ಆಗಿದ್ದು, ರಿಯಲ್ ಸ್ಟಾರ್ ಉಪೇಂದ್ರ , ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಹಲವು ಖ್ಯಾತ ನಟರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಭಾರತದಾದ್ಯಂತ ಸದ್ದು ಮಾಡುತ್ತಿರುವ, ಬಹು ನಿರೀಕ್ಷಿತ “ಕಬ್ಜ” ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ ನಲ್ಲಿ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ.

ಇದೇ ಸೆಟ್ ನಲ್ಲಿ ಸುಮಾರು 42ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಹಂತದ ಚಿತ್ರೀಕರಣ ಮುಗಿದರೆ, ಬಹುತೇಕ ಚಿತ್ರೀಕರಣ ಮುಗಿದಂತೆ. ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ.

ಖ್ಯಾತ ನಿರ್ದೇಶಕ ಆರ್.ಚಂದ್ರು ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ‌ ಕಿಚ್ಚ‌ ಸುದೀಪ ಅವರು ಅಭಿನಯಿಸುತ್ತಿರುವುದು ಅಭಿಮಾನಿಗಳ ಕಾತುರವನ್ನು ಇನ್ನಷ್ಟು ಹೆಚ್ಚಿಸಿದೆ. ಚಿತ್ರ ಬಿಡುಗಡೆಗೆ ಕರ್ನಾಟಕವಷ್ಟೇ ಅಲ್ಲದೇ ಇತರ ರಾಜ್ಯಗಳಲ್ಲೂ ತುದಿಗಾಲಿನಲ್ಲಿ ಕಾದಿದ್ದಾರೆ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ..

ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ವರಿದ್ದಾರೆ.

Related posts