Cinisuddi Fresh Cini News 

ಮನರಂಜನಾ ಕ್ಷೇತ್ರಕ್ಕೆ ಕಾಲಿಟ್ಟ ಖ್ಯಾತ ವೈದ್ಯೆ ಡಾ. ಕಾಮಿನಿ.ಎ.ರಾವ್

ಪ್ರಸೂತಿ ಮತ್ತು ಸ್ತ್ರಿರೋಗ ತಜ್ಞೆಯಾಗಿ, ಅಸಿಸಡ್ ರಿಪ್ರೊಡಕ್ಷನ್ ಕ್ಷೇತ್ರ ಸೇರಿದಂತೆ ವೈದ್ಯಕೀಯ ರಂಗದಲ್ಲಿ ದೊಡ್ಡ ಹೆಸರು ಮಾಡಿ, ಪದ್ಮಶ್ರೀ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿರುವ ಕನ್ನಡದ ಹೆಮ್ಮೆಯ ಮಹಿಳೆ ಡಾ. ಕಾಮಿನಿ ಎ. ರಾವ್.‌ ವೈದ್ಯ ವೃತ್ತಿಯಲ್ಲಿ ಅಪಾರ ಸಾಧನೆ ಮಾಡಿದ್ದರೂ ಸಾಮಾಜಿಕ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡುಬಂದಿರುವ ಕಾಮಿನಿ ರಾವ್‌ ಈಗ ತಮ್ಮ ಕಾರ್ಯವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುತ್ತಿದ್ದಾರೆ. ವೈದ್ಯಕೀಯ ಮತ್ತು ಸಮಾಜ ಸೇವೆಯ ಜತೆಗೆ ಮನರಂಜನಾ ಕ್ಷೇತ್ರಕ್ಕೂ ಕಾಲಿಡುತ್ತಿದ್ದಾರೆ. ಪೂರ್ವಿ ಪ್ರೊಡಕ್ಷನ್ಸ್ ಹೆಸರಿನಲ್ಲಿ ತಮ್ಮದೇ ಆದ ಸ್ವಂತ ನಿರ್ಮಾಣ ಸಂಸ್ಥೆಯನ್ನು ಆರಂಭಿಸುತ್ತಿದ್ದಾರೆ. ಅಧಿಕೃತವಾಗಿ ಈ ಸಂಸ್ಥೆ ಇನ್ನೇನು ಕಾರ್ಯಾರಂಭ ಮಾಡಲಿದೆ. ಇದರ ಪೂರ್ವಭಾವಿಯಾಗಿ ಮತ್ತು ಪೂರ್ವಿ ಪ್ರೊಡಕ್ಷನ್ಸ್ ಕುರಿತು ಒಂದಿಷ್ಟು ಮಾಹಿತಿ ನೀಡಲು ಪತ್ರಿಕಾಗೋಷ್ಟಿಯನ್ನು ಏರ್ಪಡಿಸಲಾಗಿತ್ತು.

ಮನರಂಜನಾ ಕ್ಷೇತ್ರದ ಮೂಲಕ ಸಾಮಾಜಿಕ ಬದಲಾವಣೆ ತರುವ ನಿಟ್ಟಿನಲ್ಲಿ ಡಾ. ಕಾಮಿನಿ ಎ.ರಾವ್ ಅವರ ಸೊಸೆ ಪೂಜಾ ಸಿದ್ಧಾರ್ಥ್ ರಾವ್ ಅವರು ನೀಡಿದ ಐಡಿಯಾ ಮೇರೆಗೆ ಈ ಸಾಹಸಕ್ಕೆ ಸಿದ್ಧರಾಗಿದ್ದಾರೆ. ಇದಕ್ಕೆ ಡಾ. ಕಾಮಿನಿ ಎ. ರಾವ್ ಅವರ ಪತಿ ಡಾ. ಎ.ಎಸ್. ಅರವಿಂದ್ ಸಹ ಸಹಕಾರ ನೀಡುತ್ತಿದ್ದಾರೆ. ಸಿನಿಮಾ ಅನ್ನೋ ವೇದಿಕೆ ಮೂಲಕ ಸಾಮಾನ್ಯ ಜನರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಒಂದಷ್ಟು ಪ್ರಯೋಗಗಳನ್ನು ಈ ಸಂಸ್ಥೆ ಮೂಲಕ ಮಾಡಲಿದ್ದಾರೆ.
ಸಾಮಾಜಿಕ ಬದಲಾವಣೆಯನ್ನೇ ಮೂಲ ಧ್ಯೇಯವಾಗಿಸಿಕೊಂಡು ಸಾಮಾನ್ಯ ಜನರ ಮೈಂಡ್ ಸೆಟ್ ಅನ್ನು ಪೂರ್ವಿ ಪ್ರೊಡಕ್ಷನ್ಸ್ ಮೂಲಕ ಧನಾತ್ಮಕ ಕೊಡುಗೆ ನೀಡುವುದು ನಮ್ಮ ಮುಖ್ಯ ಉದ್ದೇಶ. ಈ ಮೂಲಕ ಉಜ್ವಲ ರಾಷ್ಟ್ರ ನಿರ್ಮಾಣಕ್ಕೂ ಇದರಿಂದ ಅನುಕೂಲವಾಗಲಿದೆ.

# ಡಾ. ಕಾಮಿನಿ ಎ. ರಾವ್ಸ್ ಮಾಸ್ಟರ್ ಕ್ಲಾಸ್
ಡಾ. ಕಾಮಿನಿ ರಾವ್ಸ್ ಮಾಸ್ಟರ್ ಕ್ಲಾಸ್ ಕೇವಲ ಸಾಮಾನ್ಯ ಸಂಗತಿಗಳಿಂದ ಕೂಡಿರದೇ, ಸ್ಪೂರ್ತಿದಾಯಕ ಅಂಶಗಳ ಜತೆಗೆ, ಯಶಸ್ಸಿನ ಏಣಿ ಏರುವುದಕ್ಕೂ ಇದು ರಹದಾರಿಯಾಗಿದೆ. ಸಾಮಾನ್ಯನಿಂದ ಅಸಾಮಾನ್ಯನೆಡೆಗೆ ಡಾ. ಕಾಮಿನಿ ರಾವ್ಸ್ ಮಾಸ್ಟರ್ ಕ್ಲಾಸ್ನಲ್ಲಿ ಮಾಹಿತಿ ನೀಡಲಾಗುತ್ತದೆ. ಇದರ ಜತೆಗೆ ಪೂರ್ವಿ ರಾಗ ಹರಟೆ ಎಂಬ ಸ್ಫೂರ್ತಿದಾಯಕ ಕಾರ್ಯಕ್ರಮವನ್ನೂ ಆಯೋಜಿಸುತ್ತಿದ್ದು, ಒಂದಷ್ಟು ಗಾಯಕರು ಮತ್ತು ಸಂಗೀತಗಾರರನ್ನ ಆಯ್ದುಕೊಂಡು ಅವರಿಂದ ವೇದಿಕೆ ಕಾರ್ಯಕ್ರಮವನ್ನೂ ಮಾಡಲಿದ್ದಾರೆ. ಹಾಸ್ಯದ ಜತೆಗೆ ಹಾಡು ಹರಟೆಯೂ ಇಲ್ಲಿ ಪ್ರಧಾನವಾಗಿರಲಿದೆ.

# ಪೂರ್ವಿ ಪ್ರೊಡಕ್ಷನ್ಸ್
ಸಾಮಾಜಿಕ ಕಳಕಳಿಯುಳ್ಳ ಮತ್ತು ಜನಸಾಮಾನ್ಯರಿಗೂ ಹತ್ತಿರವೆನಿಸುವ ಸಿನಿಮಾಗಳನ್ನು ನಿರ್ಮಾಣ ಮಾಡಿ ಸಮಾಜಕ್ಕೆ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಧನಾತ್ಮಕ ಅಂಶಗಳಿರುವ ಮತ್ತು ಎಲ್ಲರಿಗೂ ಅನ್ವಯವಾಗುವಂತಹ ಸಿನಿಮಾಗಳನ್ನು ನಿರ್ಮಿಸುವುದು ಸಂಸ್ಥೆಯ ಗುರಿ.

# ಆನ್ಲೈನ್ನಲ್ಲೇ ಸರ್ಟಿಫಿಕೆಟ್ ಕೋರ್ಸ್ಗಳು
ಡಾ. ಕಾಮಿನಿ ಎ. ರಾವ್ ಅವರು ವೈದ್ಯಕೀಯ ಕ್ಷೇತ್ರದಲ್ಲಿರುವುದರಿಂದ ಅದರಿಂದ ಇತರರಿಗೂ ಅನುಕೂಲ ಆಗಲಿ ಎಂಬ ಕಾರಣಕ್ಕೆ, ಆನ್ಲೈನ್ ತರಗತಿಗಳನ್ನೂ ಆಯೋಜಿಸುತ್ತಿದ್ದಾರೆ. ರಿಪ್ರೊಡಕ್ಟಿವ್ ಮೆಡಿಸಿನ್, ಆಬ್ಸ್ಟೆಟ್ರಿಕ್ಸ್ ಮತ್ತು ಗೆನೊಕೊಲಜಿ ಕುರಿತ ತರಗತಿಗಳನ್ನು ಹಮ್ಮಿಕೊಂಡಿದ್ದಾರೆ. ಸಾಕಷ್ಟು ನುರಿತ ವೈದ್ಯರುಗಳು ಈ ಬಗ್ಗೆ ಆನ್ಲೈನ್ನಲ್ಲಿಯೇ ತರಗತಿಗಳನ್ನು ತೆಗೆದುಕೊಳ್ಳಲಿದ್ದಾರೆ. ಅಷ್ಟೇ ಅಲ್ಲ ಹಾಗೇ ಕಲಿತ ಕೋರ್ಸ್ಗೆ ಸರ್ಟಿಫೀಕೆಟ್ ಸಹ ನೀಡಲಿದೆ ಸಂಸ್ಥೆ. ಗ್ರಾಮೀಣ ಮತ್ತು ನಗರ ಪ್ರದೇಶದವರ ಜತೆಗೆ ವಿಶ್ವದಾದ್ಯಂತ ಎಲ್ಲೇ ಇದ್ದರೂ ಈ ಕೋರ್ಸ್ ಮಾಡಬಹುದು.

ನಮ್ಮ ಉದ್ದೇಶ
ಈ ಪೂರ್ವಿ ಪ್ರೊಡಕ್ಷನ್ಸ್ ಸಂಸ್ಥೆಯನ್ನು ತೆರೆಯುತ್ತಿರುವ ಮುಖ್ಯ ಉದ್ದೇಶ, ಸಿನಿಮಾ ನಿರ್ಮಾಣ , ಡಾಕ್ಯುಮೆಂಟರಿಗಳು, ಹರಟೆ ರೀತಿಯ ಕಾರ್ಯಕ್ರಮಗಳನ್ನು ಮತ್ತು ಎಜುಕೇಷನಲ್ ಸಿನಿಮಾಗಳನ್ನು ನಿರ್ಮಾಣ ಮಾಡಲು. ಈ ಒಂದು ಉದ್ದೇಶವನ್ನು ನೀವೆಲ್ಲರೂ ಈಡೇರಿಸಲು ಸಹಕರಿಸಿ ಎಂದು ಡಾ. ಕಾಮಿನಿ.ಎ .ರಾವ್ ಕೇಳಿಕೊಂಡರು.

ʻಕಾಮಿನಿ ಎ. ರಾವ್‌ ನನ್ನ ಅತ್ತೆ. ನಾನು ಮದುವೆಯಾಗಿ ಈ ಮನೆಗೆ ಬಂದು ಹತ್ತು ವರ್ಷಗಳಾದವು. ಇಷ್ಟು ದಿನದಲ್ಲಿ ನನ್ನ ಅತ್ತೆ ಸುಮ್ಮನೇ ಕುಳಿತಿದ್ದು ಯಾವತ್ತೂ ನೋಡಿಲ್ಲ. ಹೀಗಿರುವಾಗ ಕೊರೋನಾ ಕಾರಣಕ್ಕಾಗಿ ನಿರ್ಮಾಣಗೊಂಡ ಪರಿಸ್ಥಿತಿ ಎಂಥವರನ್ನೂ ಮನೆಯಲ್ಲಿ ಬಂಧಿಸಿತ್ತು. ಆನ್‌ ಲೈನ್‌, ಓಟಿಟಿಗಳನ್ನು ನೋಡಿ ಸಾಕಾಗಿತ್ತು. ಅದೊಂದು ದಿನ ʻಅಮ್ಮಾ ಸುಮ್ಮನೇ ಕೂತು ಬೇಸರವಾಗುತ್ತಿದೆʼ ಎಂದೆ.

ಆ ದಿನ ಹತ್ತಾರು ನಿಮಿಷಗಳ ಕಾಲ ಅತ್ತೆ ಬದುಕಿನ ಬಗ್ಗೆ ಮಾತಾಡಿದರು. ಅವರ ಮಾತುಗಳು ತುಂಬಾ ಅಮೂಲ್ಯವೆನಿಸಿತು. ಅವರ ಈ ಹಿತ ನುಡಿಗಳು, ಮಾರ್ಗದರ್ಶನದ ಮಾತುಗಳು ನಮಗಷ್ಟೇ ದಕ್ಕಿದರೆ ಹೇಗೆ? ಜಗತ್ತಿಗೆ ಯಾಕೆ ಪರಿಚಯಿಸಬಾರದು? ಎಂಬ ಐಡಿಯಾ ಬಂದು. ಈ ಕಾರಣಕ್ಕೆ ಶುರುವಾದ ಹೊಸ ಕಲ್ಪನೆ ಪೂರ್ವಿ ಪ್ರೊಡಕ್ಷನ್ಸ್ ಎಂಬ ಮಾಹಿತಿಯನ್ನು ಪೂಜಾ ಸಿದ್ಧಾರ್ಥ್ ರಾವ್ ಹೇಳುತ್ತಾರೆ.

ನಾನು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಸಿನಿಮಾರಂಗ ನನಗೆ ತೀರಾ ಹತ್ತಿರ. ನಾನು ಬಸವನಗುಡಿಯ ನ್ಯಾಷನಲ್‌ ಹೈಸ್ಕೂಲ್‌, ಕಾಲೇಜಿನಲ್ಲಿ ಓದಿದವನು. ಆಗಿನಿಂದಲೂ ಡಾ. ವಿಷ್ಣುವರ್ಧನ್‌ ನನಗೆ ಆಪ್ತರಾಗಿದ್ದರು. ಆ ನಂತರ, ಅಂಬರೀಶ್‌, ಡಾ. ರಾಜ್‌ ಕುಮಾರ್‌ ಕುಟುಂಬ ಸೇರಿದಂತೆ ಸಾಕಷ್ಟು ಜನರ ಒಡನಾಟ ಹೊಂದಿದ್ದೇನೆ. ನಮ್ಮ ಮನೆಯಲ್ಲಿ ಎಲ್ಲರೂ ಸಿನಿಮಾ ಪ್ರಿಯರಿದ್ದೇವೆ. ಈಗ ನೇರವಾಗಿ ಚಿತ್ರರಂಗದ ಜೊತೆಗೆ ಕೈ ಜೋಡಿಸುತ್ತಿದ್ದೇವೆ ಎಂದು ಡಾ. ಎ.ಎಸ್. ಅರವಿಂದ್ ತಿಳಿಸಿದರು.

Related posts