Cini NewsSandalwood

ಥ್ರಿಲ್ಲರ್ ಚಿತ್ರ ‘ಕಣಂಜಾರು’ ಮೋಷನ್ ಪೋಸ್ಟರ್ ಶೀರ್ಷಿಕೆ ಬಿಡುಗಡೆ

Spread the love

ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಮೋಷನ್ ಪೋಸ್ಟರ್ ಮತ್ತು ಶೀರ್ಷಿಕೆ ಬಿಡುಗಡೆಯಾಗಿದ್ದು ಕುತೂಹಲ ಹೆಚ್ಚಳ ಮಾಡಿದೆ. ಸದ್ಯದಲ್ಲಿಯೇ ಟೀಸರ್ ಬಿಡುಗಡೆ ಮಾಡಲು ತಂಡ ಮುಂದಾಗಿದೆ.

ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ಮತ್ತಿತರ ಕಡೆ 55 ರಿಂದ 60 ದಿನಗಳ ಕಾಲ ಚಿತ್ರೀಕಣ ಮಾಡಲಾಗಿದೆ. ಕಾರ್ಕಳ ಬಳಿಯ ಊರಿನ ಹೆಸರು ಕಣಂಜಾರು. ಥ್ರಿಲ್ಲರ್ ವಿಷಯ ಆಗಿರುವುದರಿಂದ ಆ ಹೆಸರು ಇಡಲಾಗಿದೆ. ಅದು ಯಾಕೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ಮಾಪಕರೂ ಆಗಿರುವ ಆರ್.ಬಾಲಚಂದ್ರ.

ಈ ಹಿಂದೆ ಮಹಾನುಭಾವರು ಚಿತ್ರದಲ್ಲಿ ನಾಯಕ ಜೊತೆಗೆ ನಿರ್ಮಾಣ ಮಾಡಿದ್ದೆ, ಇದೊಂದು ಆಸಕ್ತಿ ಮತ್ತು ಕುತೂಹಲ ಕಾರಿ ಸಂಗತಿಯ ಕಥೆಯನ್ನು ಹೊಂದಿದ್ದರಿಂದ ನಾನೇ ನಿರ್ದೇಶನ ಮಾಡಲು ಮುಂದಾದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಅಂತಿಮ ಹಂತದಲ್ಲಿದೆ. ಚಿತ್ರದ ಉದ ಮಾಹಿತಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ

ಚಿತ್ರದಲ್ಲಿ ಆರ್. ಬಾಲಚಂದ್ರ, ಅಪೂರ್ವ, ಶರ್ಮಿತಾ ಗೌಡ,ಹಿರಿಯ ನಟ ರಾಮಕೃಷ್ಣ, ಪಿ.ಎಸ್ ಶ್ರೀಧರ್ ಹಾಗು ಮೇಘ ಸೇರಿದಂತೆ ಹೊಸ ಕಲಾವಿದರಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಮಂಜುನಾಥ್ ಹೆಗ್ಡ್ ಕ್ಯಾಮರ ಚಿತ್ರಕ್ಕಿದೆ.

Visited 1 times, 1 visit(s) today
error: Content is protected !!