Cinisuddi Fresh Cini News 

“ಕನ್ನೇರಿ” ಫಸ್ಟ್ ಲುಕ್ ಬಿಡುಗಡೆ ಮಾಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

ನೀನಾಸಂ ಮಂಜು ನೈಜ ಘಟನೆ ಆಧಾರಿತ ಸಿನಿಮಾವೊಂದನ್ನು ಕೈಗೆತ್ತಿಕೊಂಡು, ಚಿತ್ರೀಕರಣವನ್ನು ಮುಗಿಸಿ ಫಸ್ಟ್ ಲುಕ್ ಮೂಲಕ ಎಲ್ಲರನ್ನು ಎದುರುಗೊಂಡಿದ್ದಾರೆ. ಆ ಚಿತ್ರದ ಹೆಸರೇ ಕನ್ನೇರಿ. ಕನ್ನೇರಿ ಸಿನಿಮಾ ಮಹಿಳಾ ಪ್ರಧಾನವಾದ ಚಿತ್ರ. ಈ ಚಿತ್ರದ ಫಸ್ಟ್ ಲುಕ್ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಮಾಡಿ ಶುಭ ಕೋರಿದ್ದಾರೆ.

ಇದೊಂದು ನೈಜ ಘಟನೆ ಆಧಾರಿತ ಸಿನಿಮಾ. ಕೊಡಗಿನ ದಿಡ್ಡಳ್ಳಿ ಸಂತ್ರಸ್ತರ ನೋವು ನಲಿವನ್ನ ಡೈರೆಕ್ಟರ್ ನೀನಾಸಂ ಮಂಜು ಹೇಳೋದಕ್ಕೆ ಹೊರಟಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ ಚಿತ್ರಕ್ಕೆ ಕಥೆ ಬರೆದಿದ್ದಾರೆ. ನೈಜ ಘಟನೆಯಾಧಾರಿತಾವಗಿರೋ ಕಾರಣ ಸಿನಿಮಾದಲ್ಲಿ ಬುಡಕಟ್ಟು ಜನಾಂಗದವರನ್ನು ತೊಡಗಿಸಿಕೊಳ್ಳಲಾಗಿದೆ.

ಅರ್ಚನಾ ಮಧುಸೂಧನ್ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದ ತಾರಾಗಣದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ್, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ಜೊತೆಯಾಗಿದ್ದಾರೆ.

ಬೆಂಗಳೂರು. ಎಚ್.ಡಿ.ಕೋಟೆ, ಕೋಲಾರ ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಚಿತ್ರಕ್ಕಿದೆ.

ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ‘ಕನ್ನೇರಿ’ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಚಿತ್ರಕ್ಕೆ ಪಿ.ಪಿ ಹೆಬ್ಬಾರ್ ಬಂಡವಾಳ ಹೂಡಿದ್ದು, ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದೆ.

Related posts