Cini NewsSandalwood

“ಕೆರೆಬೇಟೆ” ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಮಾಡಿದ ರಿಯಲ್ ಸ್ಟಾರ್.

‘ಕೆರೆಬೇಟೆ’ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಿದ್ದ ಸಿನಿಮಾ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ರಿಲೀಸ್ ಮಾಡಿದ್ದಾರೆ.

‘ಮಲೆನಾಡ ಬೊಂಬೆ’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಅದ್ಭುತವಾದ ಹಾಡು ನಡಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಫಿದಾ ಆಗಿದ್ದಾರೆ. ಮಲೆನಾಡಿನ ಸುತ್ತಮುತ್ತವೇ ಈ ಹಾಡಿನ ಚಿತ್ರೀಕರಣ ಮಾಡಿರುವುದು ವಿಶೇಷ.

‘ಕೆರೆಬೇಟೆ’ ನಿರ್ದೇಶಕ ರಾಜ್ ಗುರು ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ನಾಯಕ ಗೌರಿಶಂಕರ್ ಮತ್ತು ನಾಯಕಿ ಬಿಂಧು ಶಿವರಾಮ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ರೋಮ್ಯಾಂಟಿಕ್ ಹಾಡು ಇದಾಗಿದೆ. ಅಂದಹಾಗೆ ಈ ಸುಂದರ ಹಾಡಿಗೆ ‘ಕಾಂತಾರ’ ಸಿನಿಮಾದ ‘ಸಿಂಗಾರ ಸಿರಿಯೇ…’ ಹಾಡಿನ ಖ್ಯಾತಿಯ ಪ್ರಮೋದ್ ಮರುವಂತೆ ಸಾಹಿತ್ಯ ರಚಿಸಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಸಾಯಿ ವಿಘ್ನೇಶ್ ಮತ್ತು ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.

ಈ ಹಾಡಿನ ಚಿತ್ರೀಕರಣದ ಅನುಭವ ತೆರೆದಿಟ್ಟ ಸಿನಿಮಾ ತಂಡ. ‘ಈ ಹಾಡನ್ನು ತುಂಬಾ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಅತಿಯಾದ ಮಳೆಯಿಂದ ಅನೇಕ ಬಾರಿ ಚಿತ್ರಿಕರಣ ನಿಲ್ಲಿಸಲಾಗಿತ್ತು. ಮನುಷ್ಯರೇ ಓಡಾಡದೇ ಇರುವ ಜಾಗದಲ್ಲಿ ಶೂಟಿಂಗ್ ಮಾಡಿದ್ದೇವೆ. ಪ್ರಾಣಿಗಳ ಭಯ ಕೂಡ ಇತ್ತು. ಮಲೆನಾಡಿನ ತುಂಬಾ ರಿಮೋಟ್ ಏರಿಯಾದಲ್ಲಿ ನಾಲ್ಕು ದಿನಗಳ ಕಾಲ ಈ ಹಾಡನ್ನು ಸೆರೆಹಿಡಿದಿದ್ದೇವೆ. ಈ ಹಾಡಿಗಾಗಿ ಹರಸಾಹಸ ಪಟ್ಟಿದ್ದೇವೆ’ ಎನ್ನುತ್ತಾರೆ.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಇದೀಗ ಹಾಡಿನ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮುಂದಿನ ತಿಂಗಳು ಅಂದರೆ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೀಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

error: Content is protected !!