ನೆತ್ತರಿನ ಕಥಾನಕ “ಕವಳ” ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ.
ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ಅವರ ನಿರ್ಮಾಣದ ಕವಳ ಚಿತ್ರದ ಮುಹೂರ್ತ ಸಮಾರಂಭ ನಗರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕವಳ ಚಿತ್ರಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ ಆರ್.ಎಕ್ಸ್.ಸೂರಿ, ಭೈರಾದೇವಿ ಚಿತ್ರಗಳನ್ನು ನಿರ್ದೇಶಿಸಿದ್ದ ಶ್ರೀ ಜೈ ಅವರು ಈ ಚಿತ್ರದ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸಂದೀಪ್ ನಾಗರಾಜ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ತಮಿಳಿನ ಹೆಸರಾಂತ ತಂತ್ರಜ್ಞ ಸಮುದ್ರಖನಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀ ಜೈ ಕವಳ ಎಂದರೆ ತಾಂಬೂಲ. ಅದನ್ನು ಜಗಿದಾಗ ಬರುವ ಕೆಂಪುಬಣ್ಣವನ್ನು ಚಿತ್ರದಲ್ಲಿ ಹೇಳಿದ್ದೇವೆ. ಒಂದಷ್ಟು ನೈಜಘಟನೆಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆದಿದ್ದೇನೆ. ಒಂದು ಸ್ಟ್ರಾಂಗ್ ರೀಜನ್ ಗೋಸ್ಕರ ಹರಿಯುವ ರಕ್ತಧಾರೆ. ಕವಳನ ಕಥೆ ಸ್ಪೂರ್ತಿಯಾಗಿರಬಹುದು. ಅದರೆ ಇದು ಆತನದೇ ಕಥೆಯಲ್ಲ. ಯುಗಾದಿ ನಂತರ ಆರಂಭಿಸಿ ಕಾಶಿ, ಹೈದರಾಬಾದ್ ಸೇರಿದಂತೆ ಹಲವಾರು ಲೊಕೇಶನ್ ಗಳಲ್ಲಿ ಶೂಟ್ ಮಾಡುವ ಯೋಜನೆಯಿದೆ. ಸಮುದ್ರಖನಿ ಅವರದು ಹೊರರಾಜ್ಯದಿಂದ ಬಂದವರ ಹೇಗೆ ಕನ್ನಡ ಮಾತಾಡುತ್ತಾರೋ ಅದೇ ರೀತಿ ಇರುತ್ತದೆ. ನಿರ್ಮಾಪಕರು ನನ್ನನ್ನು ನಂಬಿ ದೊಡ್ಡ ಮಟ್ಟದ ಬಂಡವಾಳ ಹಾಕುತ್ತಿದ್ದಾರೆ. ಸ್ಕ್ರಿಪ್ಟ್ ಅದ್ಭುತವಾಗಿ ಮೂಡಿಬಂದಿದೆ ಎಂದರು. ನಂತರ ಸಮುದ್ರಖನಿ ಮಾತನಾಡುತ್ತ ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅವರ ಜತೆ ಎರಡು ಸಿನಿಮಾ ಮಾಡಿದ್ದು ಮರೆಯಲಾಗದ ಅನುಭವ. ನನ್ಎ ಕನ್ನಡ ಸ್ವಲ್ಪ ಬರುತ್ತೆ. ಇದರಲ್ಲಿ ಒಂದು ನೆಗೆಟಿವ್ ಪಾತ್ರ ಮಾಡುತ್ತಿದ್ದೇನೆ ಎಂದರು.

ನಿರ್ಮಾಪಕ ಲೋಕೇಶ್ ಮಾತನಾಡಿ ಸ್ಟಾರ್ಟಪ್ ಬ್ಯುಸಿನೆಸ್ ಮಾಡುತ್ತಿದ್ದೇನೆ.ಮೊದಲಿಂದಲೂ ಸಿನಿಮಾ ಬಗ್ಗೆ ಒಲವಿತ್ತು ಎಂದರು. ಮತ್ತೊಬ್ಬ ನಿರ್ಮಾಪಕ ಅಡವಯ್ಯ ಪೂಜಾರ್ ಮಾತನಾಡಿ ಸುಮಾರು 40 ಕಥೆಗಳನ್ನು ಕೇಳಿ ಇದನ್ನು ಫೈನಲ್ ಮಾಡಿದ್ದೇನೆ. ಗೂಗ್ಲಿಯಲ್ಲಿ ಸಂದೀಪ್ ಅಭಿನಯ ನೋಡಿದ್ದೆ. ನಾಯಕನ ಪಾತ್ರಕ್ಕೆ ಅವರೇ ಬೇಕೆಂದು ನಿರ್ದೇಶಕರಿಗೆ ಒತ್ತಾಯಿಸಿದೆ.ಸಮುದ್ರಖನಿ ಅವರ ಒಪ್ಪುತ್ತಾರೆ ಎಂಬ ನಂಬಿಕೆಯಿರಲಿಲ್ಲ ಎಂದು ಹೇಳಿದರು.

ನಾಯಕ ಸಂದೀಪ್ ನಾಗರಾಜ್ ಮಾತನಾಡಿ ನಾನು ಈಪಾತ್ರ ಮಾಡುತ್ತೇನೆ ಎಂದು ನನ್ನ ನಂಬಿ ಇಂಥ ದೊಡ್ಡ ಪಾತ್ರ ಕೊಟ್ಟಿದ್ದಾರೆ. ಚೆನ್ನಾಗಿ ಮಾಡುತ್ತೇನೆ ಎಂದರು.
ಈ ಚಿತ್ರಕ್ಕೆ ಎ.ಕರುಣಾಕರನ್ ಅವರ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಅವರ ಸಂಗೀತ, ಅರ್ಜುನ್ ರಾಜ್, ವಿಕ್ರಮ್ ಮೋರ್ ಅವರ ಸಾಹಸ, ಕಲೈ, ಮುರಳಿ ಅವರ ನೃತ್ಯ, ದೀಪು ಎಸ್.ಕುಮಾರ್ ಅವರ ಸಂಕಲನವಿದೆ.
ಕವಳ ಚಿತ್ರದ ಉಳಿದ ಪಾತ್ರಗಳಲ್ಲಿ ಹಿರಿಯ ನಟರಾದ ಅಚ್ಯುತ್ ಕುಮಾರ್, ರಂಗಾಯಣ ರಘು, ನಾಜರ್, ಈಶ್ವರಿರಾವ್, ಬಲ ರಾಜವಾಡಿ, ಕಿಶೋರ್, ಶ್ರವಣ್, ಗಿಲ್ಲಿ ನಟ, ಪ್ರಕಾಶ್ ತುಮ್ಮಿನಾಡ್ ಹಾಗೂ ಇತರರು ನಟಿಸುತ್ತಿದ್ದಾರೆ.