Cini NewsSandalwood

ಗೌರಿ ಶಂಕರ್ ನಟನೆಯ “ಕೆರೆಬೇಟೆ” ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ರಿಲೀಸ್

ಚಂದನವನದಲ್ಲಿ ಮತ್ತೊಂದು ಅಪ್ಪಟ ಹಳ್ಳಿ ಸೊಗಡಿನ ಕಥಾಹಂದರ ಚಿತ್ರ ಸಿದ್ಧವಾಗುತ್ತಿದ್ದು , ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ ಶಂಕರ್ ನಾಯಕನಾಗಿ ನಟಿಸಿರುವ ಸಿನಿಮಾ. ಈ ಚಿತ್ರಕ್ಕೆ ರಾಜ್ ಗುರು ಆಕ್ಷನ್ ಕಟ್ ಹೇಳಿದ್ದಾರೆ. ನಟ ಗೌರಿ ಶಂಕರ್ ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು.

ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ ನಂತರ ಇದೀಗ ಗೌರಿ ಶಂಕರ್ ಕೆರೆಬೇಟೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಕೆರೆಬೇಟೆ ರಾಜ್‌ಗುರು ಸಾರಥ್ಯದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಾಗಿದೆ. ಕಳೆದ ಹತ್ತು ವರ್ಷಗಳಿಂದ ಕನ್ನಡ ಸಿನಿಮಾರಂಗದಲ್ಲಿ ಎ.ಆರ್ ಬಾಬು, ಪವನ್‌ ಒಡೆಯರ್ ಹಾಗೂ ಇತರೆ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ರಾಜ್ ಗುರು ಅವರಿಗಿದೆ. ಇದೀಗ ಕೆರೆಬೇಟೆ ಎನ್ನುವ ವಿಭಿನ್ನ ಕಾನ್ಸೆಪ್ಟ್‌ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.

ಕೆರೆಬೇಟೆ ಎಂದರೆ ಮಲೆನಾಡ ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡ ಭಾಗದಲ್ಲಿ ವರ್ಷಕೊಮ್ಮೆ ಕೆರೆಬೇಟೆಯಾಡುತ್ತಾರೆ. ದೊಡ್ಡ ಕೆರೆಗಳಲ್ಲಿ ಇದು ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮಲೆನಾಡ ಭಾಗದ ಕೆರೆಬೇಟೆಯನ್ನು ಸಿನಿಮಾ ಮೂಲಕ ಕಟ್ಟಿಕೊಡುತ್ತಿದ್ದಾರೆ.

‘ಕೆರೆಬೇಟೆ’ ಜನಮನ ಸಿನಿಮಾ ಸಂಸ್ಥೆಯ ಮೂಲಕ ಟೈಟಲ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಜೈ ಶಂಕರ್ ಪಟೇಲ್ ಹಾಗೂ ನಾಯಕ ಗೌರಿ ಶಂಕರ್ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಕೆರೆಬೇಟೆ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ.

ಈ ನಡುವೆ ಸಿನಿಮಾತಂಡ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ. ಸದ್ಯ ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ “ಕೆರೆಬೇಟೆ” ಚಿತ್ರದ ಕೆಲಸಗಳೆಲ್ಲ ಅಂದುಕೊಂಡಂತೆ ನಡೆಯುತ್ತಿದ್ದು , ಮುಂದಿನ ಹೊಸ ವರ್ಷಕ್ಕೆ ಚಿತ್ರ ತೆರೆ ಮೇಲೆ ಬರುವ ಸಾಧ್ಯತೆ ಇದೆಯಂತೆ

error: Content is protected !!