Cinisuddi Fresh Cini News 

ಕೆಜಿಎಫ್ -2 ಟೀಸರ್ ಲೀಕ್ ಆದ ಬೆನ್ನಲ್ಲೇ ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ

ದೇಶದಾದ್ಯಂತ ಭಾರಿ ನಿರೀಕ್ಷೆಗಳನ್ನು ಮೂಡಿಸಿರುವ ಶಾಂತ್ ನೀಲ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಟೀಸರ್ ಹೇಳಿದ ಸಮಯಕ್ಕಿಂತ ಮೊದಲೇ ಬಿಡುಗಡೆ ಆಗಿದೆ.
ಶುಕ್ರವಾರ ಬೆಳಗ್ಗೆ 10.08 ನಿಮಿಷಕ್ಕೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್​ನಲ್ಲಿ ಯಶ್ ಜನ್ಮದಿನದ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಆಗಬೇಕಿತ್ತು. ಆದರೆ, ಯಾರೋ ಕಿಡಿಗೇಡಿಗಳು ಟೀಸರ್ ಸೋರಿಕೆ ಮಾಡಿದ ಹಿನ್ನೆಲೆಯಲ್ಲಿ ಇದೀಗ ಗುರುವಾರ ರಾತ್ರಿ 9.29 ನಿಮಿಷಕ್ಕೆ ಚಿತ್ರತಂಡವೇ‌ ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡಿದೆ.

ಚಿತ್ರತಂಡ ಹೇಳಿಕೊಂಡಂತೆ ಅದ್ಧೂರಿಯಾಗಿಯೇ ಟೀಸರ್ ಮೂಡಿಬಂದಿದ್ದು, ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ರಗಡ್ ಅವತಾರದಲ್ಲಿ ಕಾಣಿಸಿದ್ದಾರೆ. ಕನ್ನಡ ಸೇರಿ ಒಟ್ಟು 5 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಶೀಘ್ರದಲ್ಲಿ ಚಿತ್ರಮಂದಿರಕ್ಕೆ ಬರುವುದಾಗಿಯೂ ಟೀಸರ್ ಕೊನೆಯಲ್ಲಿ ತಂಡ ತಿಳಿಸಿದೆ. ಹೊಂಬಾಳೆ ಫಿಲಂಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ‌ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

Related posts