Cini NewsSandalwood

“ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್.

ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಚಿತ್ರ “ಕರಟಕ ದಮನಕ”. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದು , ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ಬೆಳ್ಳಿ ಪರದೆ ಮೇಲೆ ರಾರಾಜಿಸಲು ಸಿದ್ಧವಾಗಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಈಗಾಗಲೇ ಪ್ರತಿ ಹಂತದಲ್ಲೂ ಪ್ರಚಾರದ ಕಾರ್ಯವನ್ನ ಅದ್ದೂರಿಯಾಗಿ ಮುಂದುವರಿಸಿರುವ ಈ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಅನ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯ ಬಿಡುಗಡೆಯಾಗಿರುವ ಕ್ಯಾರೆಕ್ಟರ್ ಟೀಸರ್ ಬಾರಿ ವೈರಲ್ ಆಗಿ ಸದ್ದು ಮಾಡುತ್ತಿದೆ.

error: Content is protected !!