Cini NewsSandalwood

ಸಂಗೀತ ಭಟ್ ನಟನೆಯ ‘ಕ್ಲಾಂತ’ ಸಿನಿಮಾದ ಟೀಸರ್ ರಿಲೀಸ್

ವಿಭಿನ್ನ ಹೆಸರಿನ ಮೂಲಕ ಗಮನ ಸೆಳೆಯುತ್ತಿರುವ ಕ್ಲಾಂತ ಸಿನಿಮಾದ ಟೀಸರ್ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ಭಟ್ ಕಂಬ್ಯಾಕ್ ಚಿತ್ರ ಇದಾಗಿದ್ದು, ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಟೀಸರ್ ಮೂಡಿ ಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಕ್ಲಾಂತ ಟೀಸರ್ ಇದ್ದು , ಸಂಗೀತ ಅವರ ನಟನೆ ಎಲ್ಲರ ಗಮನ ಸೆಳೆದಿದೆ.

ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಕ್ಲಾಂತ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ದಟ್ಟ ಅರಣ್ಯಕ್ಕೆ ತೆರಳುವ ಇಬ್ಬರು ಪ್ರೇಮಪಕ್ಷಿಗಳನ್ನು ಗ್ಯಾಂಗ್ ಒಂದು ಅಟ್ಯಾಕ್ ಮಾಡುತ್ತದೆ. ಆ ಗ್ಯಾಂಗ್ ನಿಂದ ಆ ಜೋಡಿ ಹೇಗೆ ತಪ್ಪಿಕೊಂಡು ಬರ್ತಾರೆ.

ಅವರ ವಿರುದ್ಧ ಹೇಗೆ ಹೋರಾಡುತ್ತಾರೆ ಅನ್ನೋದನ್ನು ಟೀಸರ್ ನಲ್ಲಿ ಕೊಡಲಾಗಿದೆ. ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭರಾಜ್ , ವೀಣಾ ಸುಂದರ್ , ಕಾಮಿಡಿ ಕಿಲಾಡಿ ದೀಪಿಕಾ , ಪ್ರವೀಣ್ ಜೈನ್ , ಯುವ , ತಿಮ್ಮಪ್ಪ ಕುಲಾಲ್ , ಸ್ವಪ್ನ , ರಾಘವೇಂದ್ರ ಕಾರಂತ್ , ಪಂಚಮಿ ವಾಮಂಜೂರ್ , ವಾಮದೇವ ಪುಣಿಂಚತ್ತಾಯ ಮುಂತಾದ ತಾರಾಬಳಗದಲ್ಲಿದ್ದಾರೆ.

ಕ್ಲಾಂತ ಸಿನಿಮಾದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯ , ಗುಂಡ್ಯ , ಕಳಸ ಸುತ್ತ ಮುತ್ತ ಕಾಡಿನಲ್ಲಿ ಅದ್ಧೂರಿ ವೆಚ್ಚದಲ್ಲಿ ತಯಾರಾಗಿದೆ. ಪಕ್ಕಾ ಆಕ್ಷನ್ , ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಎಸ್ ಪಿ ಚಂದ್ರಕಾಂತ್ ಸಂಗೀತ, ಪಿಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಚಿತ್ರಕ್ಕಿದೆ. ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದ್ದು, ವಿನೋದ್ ಸ್ಟಂಟ್ ಮಾಸ್ಟರ್ ಆಗಿ , ಮಹೇಶ್ ದೇವ್ ಡಿ ಎನ್ ಪುರ ಸಂಭಾಷಣೆ ಸಿನಿಮಾಕ್ಕಿದೆ.

ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ . ಅನುಗ್ರಹ ಪವರ್ ಮೀಡಿಯಾ ಬ್ಯಾನರ್ ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಹೇಮಂತ್ ರೈ ಸಹ ನಿರ್ಮಾಪಕರಾಗಿ ಆಗಿ ಸಾಥ್ ಕೊಟ್ಟಿದ್ದಾರೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದೆ.

error: Content is protected !!