Cini NewsSandalwood

ಅಕ್ಟೋಬರ್ 13 ರಂದು “ಕುದ್ರು” ಚಿತ್ರ ಬಿಡುಗಡೆ

Spread the love

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. “ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ & ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ.

ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ(ರಿಗ್) ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಜನಪ್ರಿಯವಾಗಿದೆ ಎಂದರು.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಕಾಣಿಸಿಕೊಂಡಿರುವು ದಾಗಿ ನಟಿ ಡೈನ ಡಿಸೋಜ ತಿಳಿಸಿದರು. ನನ್ನದು ಈ ಚಿತ್ರದಲ್ಲಿ ಮುಸ್ಲಿಂ ಹುಡುಗನ ಪಾತ್ರವೆಂದರು ನಟ ಫರ್ಹಾನ್. ಚಿತ್ರೀಕರಣವಾದ ಸ್ಥಳಗಳ ಬಗ್ಗೆ ಛಾಯಾಗ್ರಾಹಕ ಶ್ರೀ ಪುರಾಣಿಕ್ ಮಾಹಿತಿ ನೀಡಿದರು.‌ “ಕುದ್ರು” ಚಿತ್ರದಲ್ಲಿ ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ.

ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ. ಪ್ರತೀಕ್ ಕುಂದು ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ “ಕುದ್ರು” ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ

Visited 1 times, 1 visit(s) today
error: Content is protected !!