Cinisuddi Fresh Cini News 

“ಲಂಕೆ” ಲಿರಿಕಲ್ ಹಾಡಿಗೆ ಭಾರಿ ಮೆಚ್ಚುಗೆ

ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ “ಲಂಕೆ” ಚಿತ್ರದ ಲಿರಿಕಲ್ ಸಾಂಗ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.ರಾಮಪ್ರಸಾದ್ ಎಂ.ಡಿ.ಬರೆದಿರುವ “ನೋಡು ನೋಡು ಯೋಗಿ ಬಾಸು ಮಾಸು ಎಂಟ್ರಿ ಕೊಟ್ಟೇಬಿಟ್ಟ. ಧೂಳಿನಿಂದ ಎದ್ದು ಬಂದು ಅಂಬಾರಿ ಏರೇ ಬಿಟ್ಟ” ಎಂಬ ಹಾಡನ್ನು ಖ್ಯಾತ ಗಾಯಕ ಆಂಥೋನಿ ದಾಸ್ ಹಾಡಿದ್ದಾರೆ. ಕಾರ್ತಿಕ್ ಶರ್ಮ ಸಂಗೀತ ನೀಡಿದ್ದಾರೆ.

ಇಂದು ಬಿಡುಗಡೆಯಾಗಿರುವ ಈ ಲಿರಿಕಲ್ ಸಾಂಗ್ ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿದೆ. . ಸಾಹಸ ಪ್ರಧಾನ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮಪ್ರಾಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ.

ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಲೂಸ್ ಮಾದ ಯೋಗೇಶ್ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ, ಆದ್ಯ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts