Cinisuddi Fresh Cini News 

ನ.24ರಂದು ಬಿಡುಗಡೆಯಾಗಲಿದೆ ‘ಮಂಗಳವಾರ ರಜಾದಿನ’ ಚಿತ್ರದ ಟೈಟಲ್ ಸಾಂಗ್

ಶೀರ್ಷಿಕೆಯಲ್ಲೇ ವಿಭಿನ್ನತೆಯಿರುವ ಮಂಗಳವಾರ ರಜಾದಿನ ಚಿತ್ರದ ಶೀರ್ಷಿಕೆ ಹಾಡು ನವೆಂಬರ್ 24ರಂದು ಬಿಡುಗಡೆಯಾಗಲಿದೆ.ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಚಿತ್ರದ ಶೀರ್ಷಿಕೆ ಹಾಡನ್ನು ವಿಜಯಪ್ರಕಾಶ್ ಹಾಡಿದ್ದಾರೆ. ಪ್ರಜೋತ್ ಡೇಸಾ ಸಂಗೀತ ನೀಡಿರುವ ಈ ಹಾಡು ಲಹರಿ‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

ಕ್ಷೌರಿಕನ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ ಈ ಸಿನಿಮಾ. ಈ ಚಿತ್ರದ ಶೀರ್ಷಿಕೆ ಗೀತೆ ಕೂಡ ಸವಿತಾ ಸಮಾಜದವರ ಕೀರ್ತಿ ಸಾರುವ ಹಾಗಿದೆ ಎನ್ನುತ್ತಾರೆ ನಿರ್ದೇಶಕ ಯುವಿನ್. ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ‌ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಬಹುತೇಕ ಭಾಗದ ಚಿತ್ರೀಕರಣ ನಡೆದಿದೆ.

ಯವಿನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕನಾಗಿ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟಿಸಿದ್ದಾರೆ. ಚಂದನ್ ಆಚಾರ್ ಈ ಚಿತ್ರದಲ್ಲಿ ಕ್ಷೌರಿಕನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಲಾಸ್ಯ ನಾಗರಾಜ್ ಈ ಚಿತ್ರದ ನಾಯಕಿ. ‌ ಜಹಂಗೀರ್, ರಜನಿಕಾಂತ್, ಗೋಪಾಲ್ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಾಲ್ಕು ಹಾಡುಗಳಿದ್ದು ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ. ಋತ್ವಿಕ್‌ ಮುರಳೀಧರ್ ಹಿನ್ನೆಲೆ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ ಹಾಗೂ ಭೂಷಣ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈಗಾಗಲೇ ಬಿಡುಗಡೆಯಾಗಿರುವ ಮಂಗಳವಾರ ರಜಾದಿನ ಚಿತ್ರದ ಟ್ರೇಲರ್ ಜನಮನಸೂರೆಗೊಂಡಿದೆ‌. ಡಿಸೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

Related posts