Cinisuddi Fresh Cini News 

ಹಿರಿಯ ನಟ, ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ನಿಧನ

ಬೆಂಗಳೂರು,ಮೇ,2, : ಲಂಚಾವತಾರ ನಾಟಕದ ಮೂಲಕ ಮನೆ ಮಾತಾಗಿದ್ದ ಹಿರಿಯ ನಟ ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್‌ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಮಾಸ್ಟರ್ ಹಿರಣ್ಣಯ್ಯ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಪತ್ನಿ ಮತ್ತು ಐವರು ಮಕ್ಕಳನ್ನ ಮಾಸ್ಟರ್ ಹಿರಣ್ಣಯ್ಯ ಅವರು ಅಗಲಿದ್ದಾರೆ. ಲಂಚಾವತಾರ ಎಂಬ ನಾಟಕದಿಂದ ಮಾಸ್ಟರ್ ಹಿರಣ್ಣಯ್ಯ ಖ್ಯಾತರಾಗಿದ್ದರು. ಇವರು ರಾಜ್ಯೋತ್ಸವ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನ ಪಡೆದಿದ್ದರು. ಕೆರ್ ಆಫ್ ಪುಟ್ ಬಾತ್, ಶಾಂತಿ ನಿವಾಸ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು.

ಇತ್ತೀಚೆಗೆ ಪಿತ್ತಜನಕಾಂಗ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಂಚ ಸಾಮ್ರಾಜ್ಯ, ನಂ.73 ಶಾಂತಿ ನಿವಾಸ, ಗಜ ಸೇರಿದಂತೆ 31 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ. ಅವರ ಲಂಚಾವತಾರ ನಾಟಕವಂತೂ ಇಡೀ ಕರ್ನಾಟಕದಲ್ಲೂ ಮನೆಮಾತಾಗಿದೆ.

ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ನಡೆಯಲಿದ್ದು, ಪಾರ್ಥಿವ ಶರೀರವನ್ನು ಬನಶಂಕರಿಯ ಅವರ ನಿವಾಸದಲ್ಲಿ ಇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Share This With Your Friends

Related posts