Cinisuddi Fresh Cini News 

“ಆಪರೇಶನ್ D” ಎಲ್ಲಾ ಹಾಡುಗಳಿಗೆ ಅನಿರುದ್ಧ್ ಶಾಸ್ತ್ರಿ ಗಾನ

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ್ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ್ ಶಾಸ್ತ್ರಿ.

ವೇದಿಕ ಹಾಗೂ ಪೃಥ್ವಿ ಭಟ್(ಸರಿಗಮಪ ಖ್ಯಾತಿ) ಸಹ ಅನಿರದ್ಧ್ ಅವರೊಂದಿಗೆ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಸದ್ಯದಲ್ಲೇ ಆಡಿಯೋ ರಿಲೀಸ್ ಆಗಲಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಬಾಕಿಯಿದೆ.

ಕಲಾವಿದರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ತಿರುಮಲೇಶ್, ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ.

ರಾಜ ರವಿಶಂಕರ್, ತಿರುಮಲೇಶ್, ಸಿದ್ದರಾಜು, ಪ್ರಶಾಂತ್ ಸಂಭಾಷಣೆ
ಬರೆದಿದ್ದಾರೆ. ವೇದಿಕ ಹಾಗೂ ದ ದ್ವೇಪಾಯನ‌ ಸಿಂಗ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕೆಂಪಗಿರಿ ಹಾಗೂ ವೇದಿಕ ಹಾಡುಗಳನ್ನು ರಚಿಸಿದ್ದಾರೆ.

ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಕ್ರಿಯೇಟಿವ್ ಹೆಡ್ ಸುರೇಶ್ .ಬಿ.

ಜಯ ಹರಿಪ್ರಸಾದ್(ಜೆರ್ರಿ ಮಾಸ್ಟರ್‌) ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.ವಿನೋದ್ ದೇವ್, ಸುಹಾಸ್ ಆತ್ರೇಯ(ಕಮಲಿ ಧಾರಾವಾಹಿ), ರುದ್ರೇಶ್ ಬುದನೂರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಲ (U2 ನಿರೂಪಕಿ) ಇದ್ದಾರೆ.

ಶಿವಮಂಜು, ವೆಂಕಟಾಚಲ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಶಿವಾನಂದ, ಮಹೇಶ್ ಎಸ್ ಕಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

Related posts