ಟೊವಿನೋ ಥಾಮಸ್ ನಟನೆಯ ‘ಪಳ್ಳಿಚಟ್ಟಂಬಿ’ ಸಿನಿಮಾ ಏಪ್ರಿಲ್ 9ರಂದು ಬಿಡುಗಡೆ.
ಮಲಯಾಳಂ ನಟ ಟೊವಿನೋ ಥಾಮಸ್ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಅವರು ಪಳ್ಳಿಚಟ್ಟಂಬಿ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ಡಿಜೋ ಜೋಸ್ ಆಂಟೋನಿ ಸಾರಥ್ಯದ ಪಳ್ಳಿಚಟ್ಟಂಬಿ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಚಿತ್ರತಂಡ ರಿಲೀಸ್ ಡೇಟ್ ಕೂಡ ಘೋಷಿಸಿದೆ. ಪಳ್ಳಿಚಟ್ಟಂಬಿ ಸಿನಿಮಾ ಏಪ್ರಿಲ್ 9ರಂದು ವಿಶ್ವಾದ್ಯಂತ ತೆರೆಗೆ ಎಂಟ್ರಿ ಕೊಡುತ್ತಿದೆ. ವರ್ಲ್ಡ್ ವೈಡ್ ಫಿಲ್ಮ್ಸ್ ಮತ್ತು ಸಿ ಕ್ಯೂಬ್ ಬ್ರದರ್ಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಪಳ್ಳಿಚಟ್ಟಂಬಿ ಸಿನಿಮಾವನ್ನು ನೌಫಲ್ ಮತ್ತು ಬ್ರಿಜೇಶ್ ನಿರ್ಮಿಸಿದ್ದಾರೆ. ಕನ್ನಡ, ಮಲಯಾಳಂ ಸೇರಿದಂತೆ ಐದು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ಕಯಾದು ಲೋಹರ್ ನಾಯಕಿಯಾಗಿ ನಟಿಸಿದ್ದಾರೆ. ವಿಜಯರಾಘವನ್, ಸುಧೀರ್ ಕರಮನ, ಬಾಬುರಾಜ್, ವಿನೋದ್ ಕೆದಮಂಗಲಂ, ಪ್ರಶಾಂತ್ ಅಲೆಕ್ಸಾಂಡರ್ ಮತ್ತು ಇತರ ಹಲವಾರು ತಾರಾಗಣದಲ್ಲಿದ್ದಾರೆ. 1950-60ರ ದಶಕದ ಸುತ್ತ ಕಥೆಯನ್ನು ಎಣೆಯಲಾಗಿದೆ. ಚಿತ್ರದ ಛಾಯಾಗ್ರಹಣವನ್ನು ಟಿಜೊ ಟಾಮಿ ನಿರ್ವಹಿಸಿದರೆ, ಜೇಕ್ಸ್ ಬಿಜಾಯ್ ಸಂಗೀತ ಸಂಯೋಜಿಸಿದ್ದಾರೆ. ಸಂಕಲನವನ್ನು ಶ್ರೀಜಿತ್ ಸಾರಂಗ್ ಮತ್ತು ನಿರ್ಮಾಣ ವಿನ್ಯಾಸವನ್ನು ದಿಲೀಪ್ ನಾಥ್ ನಿರ್ವಹಿಸಿದ್ದಾರೆ. ಚಿತ್ರಕಥೆಯನ್ನು ಎಸ್ ಸುರೇಶ್ ಬಾಬು ಬರೆದಿದ್ದಾರೆ.